To see the other types of publications on this topic, follow the link: ಸಮಾಜ.

Journal articles on the topic 'ಸಮಾಜ'

Create a spot-on reference in APA, MLA, Chicago, Harvard, and other styles

Select a source type:

Consult the top 50 journal articles for your research on the topic 'ಸಮಾಜ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಮಾಧವ, ಎಂ. ಕೆ. "ಬಸವಣ್ಣನ ವಚನಗಳಲ್ಲಿ ಸಮ ಸಮಾಜದ ಪ್ರಸ್ತುತತೆ". AKSHARASURYA 04, № 02 (2024): 27 to 32. https://doi.org/10.5281/zenodo.11525708.

Full text
Abstract:
ಕನ್ನಡ ಸಾಹಿತ್ಯದಲ್ಲಿ ೧೨ನೇ ಶತಮಾನವನ್ನು ವಚನಗಳ ಯುಗವೆಂದು ಕರೆಯಲಾಗುತ್ತದೆ. ಬಸವಣ್ಣ ವಚನ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದವನು. ತನ್ನ ವಚನಗಳ ಮೂಲಕ ‘ಕಾಯಕವೇ ಕೈಲಾಸ’ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದರು. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಆರಿಸಿ ಹೊರಟ ದಾರ್ಶನಿಕ ಬಸವಣ್ಣ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು
APA, Harvard, Vancouver, ISO, and other styles
2

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Full text
Abstract:
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
APA, Harvard, Vancouver, ISO, and other styles
3

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
4

ಜ್ಯೋತಿ, ಎನ್. ಭಟ್. "ಮಾನವೀಯ ಸಮಾಜ ರೂಪಿಸುವಲ್ಲಿ ವಚನಗಳ ಪಾತ್ರ". AKSHARASURYA JOURNAL 06, № 04 (2025): 97 to 106. https://doi.org/10.5281/zenodo.15490983.

Full text
Abstract:
ವಚನ ಸಾಹಿತ್ಯವು 12ನೇ ಶತಮಾನದ ಕನ್ನಡದ ವಿಶಿಷ್ಟ ಸಾಹಿತ್ಯಪ್ರಕಾರವಾಗಿದೆ. ಇದನ್ನು ಪಂಡಿತರಿಗೆ ಮೀಸಲಾಗಿದ್ದ ಸಾಹಿತ್ಯದ ಮೀರೆದು, ಸಾಮಾನ್ಯ ಜನರ ಬದುಕು, ಅನುಭವ, ತತ್ವಗಳನ್ನು ಸರಳವಾದ ಭಾಷೆಯಲ್ಲಿ ವ್ಯಾಖ್ಯಾನಿಸಿ ಸಮಾಜದಲ್ಲಿ ಜಾಗೃತಿ ತರಲು ಶರಣರು ಬಳಸಿದರು. ಮಾತನ್ನು ಮತಿಸಿದಾಗ ಮಾತ್ರ ವಚನವಾಗುವುದು ಎಂಬ ತತ್ವದೊಂದಿಗೆ, ವಚನಗಳು ಅನುಭವದ ಭಾವಗೀತೆಗಳಾಗಿವೆ. ಇದರಲ್ಲಿ ಧರ್ಮ, ನೀತಿ, ಜ್ಞಾನ, ಶ್ರಮ, ಸಮಾನತೆ, ಕಾಯಕ ಮತ್ತು ದಾಸೋಹದಂತಹ ಮಾನವ ಮೌಲ್ಯಗಳು ಸೊಗಸಾಗಿ ಪ್ರತಿಬಿಂಬಿಸುತ್ತವೆ. ಜಾತಿ, ಲಿಂಗ, ಧರ್ಮಗಳ ಭೇದವನ್ನು ತಿರಸ್ಕರಿಸಿ ಎಲ್ಲರಿಗೂ ಸಮಾನ ಸ್ಥಾನವಿರಬೇಕು ಎಂಬ ಸಂದೇಶ ನೀಡುತ್ತವೆ. ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಚನ್ನಬಸವಣ್ಣನಂತಹ ಶರಣರು ಸಮಾಜ ಸುಧಾರಣೆಗೆ ಮುಂಚೂಣಿಯಲ್ಲಿದ್ದರು. ಅವರು ಪುರಾಣಕಥೆಗಳನ್ನು ಬಳಸದೆ, ತ
APA, Harvard, Vancouver, ISO, and other styles
5

ಮಂಜುಳಾಕ್ಷಿ, ಎಲ್. "ಮಹಿಳೆ ಸಮಾನತೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 72 to 83. https://doi.org/10.5281/zenodo.15504265.

Full text
Abstract:
ಕಾಲಾಂತರದಿಂದಲೂ ಮಹಿಳೆ ಸಮಾಜದಲ್ಲಿ ತನ್ನ ಅಸ್ವತ್ವಕ್ಕಾಗಿ ಒಂದಲ್ಲ ಒಂದು ರೀತಿಯಲ್ಲಿ ಧ್ವನಿ ಎತ್ತುತ್ತಲೆ ಬಂದಿದ್ದಾಳೆ. ಇದನ್ನು ನಾವು ಜನಪದ ಹೆಣ್ಣು ಅದರ ಪ್ರಕಾರವಾದ ತ್ರಿಪದಿಯಲ್ಲಿ ತನ್ನ ನೋವನ್ನು ಮತ್ತು ಸಮಾಜದ ಕಟ್ಟುಪಾಡು ಕಂದಾಚಾರಗಳನ್ನು ಮೌನವಾಗಿಯೇ ವಿರೋಧಿಸುತ್ತಾ ಬಂದಿದ್ದಾಳೆ. ಸಾಹಿತ್ಯದಲ್ಲಿ ಅವಳು ತಾಯಿಯಾಗಿ ಅಕ್ಕ-ತಂಗಿ, ನಾದಿನಿ, ಹೆಂಡತಿ, ಅತ್ತೆ ಹೀಗೆ ಅನೇಕ ಪಾತ್ರಗಳಲ್ಲಿ ಪುರುಷನೊಂದಿಗೆ ಜೀವಿಸುತ್ತಾ ಮಾನ್ಯತೆ ಪಡೆದಿದ್ದು ಅವನಿಂದ ದೇವತೆಯಾಗಿ, ಪ್ರಿಯೆಯಾಗಿ, ಕುಟುಂಬದ ಕಣ್ಣಾಗಿ, ಅವನ ಅರ್ಧಾಂಗಿಯಾಗಿದ್ದರೂ ಕೂಡ ಸಮಾಜದಲ್ಲಿ ಅವಳಿಗೆ ಅಂದಲ್ಲ ಇಂದಿಗೂ ಎರಡನೇ ದರ್ಜೆಯ ಸ್ಥಾನವಿದೆ ಅವಳನ್ನು ಪುರುಷ ಸಮಾಜ ತನ್ನ ಬಂಧಿಯಲ್ಲೇ ಬಂಧಿಸಿ ಅವಳ ಮೇಲೆ ಕಟ್ಟುಪಾಡು, ಕಂದಾಚಾರ ಪದ್ಧತಿಗಳನ್ನು ಹೇರುತ್ತಾ ಸಮಾಜದಲ್ಲಿ ಅವಳಿ ಯಾವುದೇ ಸ
APA, Harvard, Vancouver, ISO, and other styles
6

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್‌ ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
7

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
8

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Full text
Abstract:
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
APA, Harvard, Vancouver, ISO, and other styles
9

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ
APA, Harvard, Vancouver, ISO, and other styles
10

ವಸುಂಧರಿ, ಎನ್. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 233 to 240. https://doi.org/10.5281/zenodo.15504705.

Full text
Abstract:
ಆತ್ಮಾನುಭಾವದ ಚೈತನ್ಯ ಮತ್ತು ಸಮಾಜಕಲ್ಯಾಣದ ತೀವ್ರಕಾಳಜಿಯೊಂದಿಗೆ ಮೂಢನಂಬಿಕೆ, ಕಂದಾಚಾರಗಳಿಂದ ಜಡವಾಗಿದ್ದ ಸಮಾಜವನ್ನು ಪರಿವರ್ತಿಸುವ ಸಂಕಲ್ಪದಿಂದ ಅವರು ಒಂದು ವಿನೂತನ ಚಳುವಳಿಯನ್ನೇ ಪ್ರಾರಂಭಿಸಿದರು. ಮೇಲು-ಕೀಳು ಎಂಬ ವರ್ಣ ಅಸಮಾನತೆ;ಬಡವ ಬಲ್ಲಿದ ಎಂಬ ವರ್ಗ ತಾರತಮ್ಯ;ಹೆಣ್ಣು-ಗಂಡು ಎಂಬ ಲಿಂಗಭೇದ ಇವೆಲ್ಲ ತರತಮ ವ್ಯವಸ್ಥೆಯನ್ನು ಹೋಗಲಾಡಿಸಿ ಸಮಾನತೆಯ ಆಧಾರದ ಮೇಲೆ ಹೊಸ ಸಮಾಜವನ್ನು ಅವರು ಕಟ್ಟಬಯಸಿದರು. ಇದಕ್ಕಾಗಿ ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪನೆಯಾಯಿತು. ಬಸವಣ್ಣ ಸಂಚಾಲಕನಾಗಿ ಮುಂದೆ ನಿಂತ. ಮಹಾನುಭಾವಿ ಅಲ್ಲಮಪ್ರಭುವಿನ ಮಾರ್ಗದರ್ಶನ ದೊರೆಯಿತು. ಚೆನ್ನಬಸವ, ಅಕ್ಕನಾಗಮ್ಮ, ಹಡಪದ ಅಪ್ಪಣ್ಣ, ಮಡಿವಾಳ ಮಾಚಯ್ಯ ಮೊದಲಾದ ನೂರಾರು ವಚನಕಾರರು ಕಾರ್ಯಕರ್ತರಾಗಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡರು. ಬಸವಾದಿ ಶರಣರು ಕಲ್ಯಾಣದಲ್ಲಿ ಹೊ
APA, Harvard, Vancouver, ISO, and other styles
11

ಉಮೇಶ್, ಬಿ. ಆರ್. "ನಲ್ಲೂರರ ʼನೀನೆಂಬ ನಾನುʼ ಕವನ ಸಂಕಲನದ ವಿಭಿನ್ನ ನೆಲೆಗಳು". AKSHARASURYA JOURNAL 05, № 06 (2025): 92 to 104. https://doi.org/10.5281/zenodo.14788762.

Full text
Abstract:
ಆಧುನಿಕ ಕನ್ನಡ ಸಾಹಿತಿಗಳಲ್ಲಿ ಆರ್.ಕೆ.ನಲ್ಲೂರು ಪ್ರಸಾದ್‌ರವರು ಒಬ್ಬರು. ಯಾವುದೇ ಒಂದು ಸಾಹಿತ್ಯಿಕ ಪಂಥಕ್ಕೆ ಸೀಮಿತರಾಗದ ಇವರು ಸಮನ್ವಯತೆಯಿಂದ ಕಾವ್ಯ ಕಟ್ಟುತ್ತಿರುವವರು. ಇವರು ಕವಿಯಾಗಿ, ಜಾನಪದ ವಿದ್ವಾಂಸರಾಗಿ, ಕಲಾವಿದರಾಗಿ, ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿ, ವಿಚಾರವಾದಿಯಾಗಿ, ಸಂಸ್ಕೃತಿ ಚಿಂತಕರಾಗಿ, ಲೇಖಕರಾಗಿಯೂ ಗುರುತಿಸಲ್ಪಟ್ಟಿದ್ದಾರೆ. ಸಾಹಿತಿಯಾದವನಿಗೆ ತಾನು ಬದುಕುತ್ತಿರುವ ಸಮಾಜದ ಬಗ್ಗೆ ಸದಾಕಾಲ ಕೃತಜ್ಞತಾ ಭಾವವೇ ಇರುತ್ತದೆ. ಸಮಾಜದ ಪ್ರತಿಯೊಂದು ಆಗು-ಹೋಗುಗಳನ್ನು ಆತ ಸದಾ ತೆರೆದ ಹೃದಯದಿಂದ ಸ್ವೀಕರಿಸಿ, ಅನುಭವಿಸಿ ಅವುಗಳಿಗೆ ಅಭಿವ್ಯಕ್ತಿಸುತ್ತಾ ಬದುಕುತ್ತಾನೆ. ಅವನ ಅಭಿವ್ಯಕ್ತಿಯು ಮೌಖಿಕವಾಗಿ ಇಲ್ಲವೇ ಕಾರ್ಯರೂಪದಲ್ಲಿ ಅಭಿವ್ಯಕ್ತಿಸಲ್ಪಡುತ್ತದೆ. ಸಾಹಿತಿಯು ತಾನು ಕಂಡುಂಡ ಅನೇಕ ಘಟನೆಗಳಿಗೆ ಪ್ರತಿಕ
APA, Harvard, Vancouver, ISO, and other styles
12

ಲೋಹಿತ್, ಪಿ. "ಕನ್ನಡ ಸಾಹಿತ್ಯ ಪರಂಪರೆ ಮತ್ತು ಜನಪರ ಆಲೋಚನ ಕ್ರಮಗಳು". AKSHARASURYA JOURNAL 05, № 03 Special Issue (2024): 24 to 32. https://doi.org/10.5281/zenodo.14246380.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಗೆ ತನ್ನದೇ ಆದ ಶ್ರೇಷ್ಠತಮವಾದ ಸಾಹಿತ್ಯ ಪರಂಪರೆಯಿದೆ. ಜನಪರ ಆಲೋಚನಾ ಕ್ರಮಗಳನ್ನು ಹೊಂದಿದ್ದು ಜೀವನಾನುಭವದ ಗಟ್ಟಿ ಸೆಲೆಯೊಂದಿಗೆ ಈ ಮಣ್ಣಿನ ನಾಡಿಮಿಡಿತವನ್ನು ಅರಿಯುವ ಶಕ್ತಿ ಇದೆ. ಯಾವುದೇ ಭಾಷೆಯ ಸಾಹಿತ್ಯ ಚರಿತ್ರೆಗೆ ತನ್ನದೇ ಆದ ಸ್ವರೂಪ, ಸಂಸ್ಕೃತಿಯ ಮನೋಹಿರಿಮೆ ಹಾಗೂ ಜನಪರ ಆಲೋಚನ ಪರಂಪರೆ ಮತ್ತು ಚಹರೆಗಳಿರುವಂತೆ ಕನ್ನಡ ಸಾಹಿತ್ಯಕ್ಕೂ ಕೂಡ ತನ್ನದೇ ಸಾಮಾಜಿಕ ಆಯಾಮಗಳಿವೆ. ಒಂದು ನಾಗರಿಕತೆಯ ಪರಂಪರೆಯ ಪ್ರಭಾವಳಿಯಲ್ಲಿ ಬೆಳೆದ ಸಾಹಿತ್ಯ ತನ್ನ ಸಮಾಜದ ನಾಡಿಮಿಡಿತದೊಂದಿಗೆ ಅಗಾಧವಾದ ಜೀವನ ರಸಗಂಗೆಯೊಂದಿಗೆ ಅನಂತಕಾಲ ಪಯಣಿಸಿ; ಹಲವು ಕಾಲಘಟ್ಟದಲ್ಲಿ ಅನಂತ ಬದುಕಿಗೆ ಮಾರ್ಗದರ್ಶಿಯಾಗಿ ತನ್ನೊಡಲನ್ನು ತೆರೆದಿಡುವ ಕೆಲಸ ಮಾಡುತ್ತದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಅಖಂಡ ಪರಂಪರೆ ಇದೆ. ವಿವಿಧ ಕಾಲ ಘಟ್ಟಗಳ
APA, Harvard, Vancouver, ISO, and other styles
13

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
14

ನಸ್ರೀನ್, ಬಾನು. "ಕನ್ನಡ ಅನುವಾದಿತ ಮಹಿಳಾ ಆತ್ಮಕಥೆಗಳು: ವಿವಿಧ ಆಯಾಮಗಳು". AKSHARASURYA 05, № 01 (2024): 43 to 49. https://doi.org/10.5281/zenodo.13870664.

Full text
Abstract:
ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆಯ ಪುಟಗಳನ್ನು ತಿರುವಿ ಹಾಕಿದರೆ ಆತ್ಮಕಥೆಗಳನ್ನು ಕಟ್ಟಿಕೊಟ್ಟವರು ಬಹಳ ವಿರಳ. ಒಬ್ಬ ಮಹಿಳೆ ತನಗಿರುವ ಮಿತಿಗಳನ್ನು ಉಲ್ಲಂಘಿಸಿ ಸ್ಥಾಪಿತ ವ್ಯವಸ್ಥೆಯೊಂದು ಒಡ್ಡುವ ಸವಾಲುಗಳಿಗೆ ಎದುರಾಗುತ್ತಲೆ ತನ್ನ ಆತ್ಮವೃತ್ತಾಂತವನ್ನು ಸಾರ್ವಜನಿಕ ನೋಟಕ್ಕೆ ತೆರೆದಿಡುವ ದಿಟ್ಟತನಕ್ಕೆ ಬಹಳ ಸಮಯವೇ ಬೇಕಾಯಿತು. ಹೀಗೆ ಆರಂಭವಾದ ಮಹಿಳಾ ಆತ್ಮಕಥನಗಳೂ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪನ್ನು ಮೂಡಿಸುತ್ತಿವೆ.  ಆತ್ಮಕಥೆ ಎಂದರೆ ತಮ್ಮ ಆತ್ಮ ವೃತ್ತಾಂತವನ್ನು ತಾವೆ ದಾಖಲಿಸುವ ಪ್ರಕ್ರಿಯೆ, ಮಹಿಳಾ ಆತ್ಮಕಥೆಗಳಲ್ಲಿ ಕೆಲವೊಮ್ಮೆ ತಮ್ಮ ಆತ್ಮ ವೃತ್ತಾಂತವನ್ನು ಸ್ವ್ವಗತದ ಮಾದರಿಯಲ್ಲಿ ಬರೆದಿಟ್ಟುಕೊಳ್ಳಬೇಕಾದ ಅನಿವಾರ್ಯತೆ ಉಂಟಾಗುತ್ತದೆ. ಭಾರತದಂತಹ ಸಂಪ್ರದಾಯಿಕ ಸಮಾಜ ಮಹಿಳೆಗೆ ಕೆಲವು ಚೌಕಟ್ಟುಗಳನ್ನು ನಿರ
APA, Harvard, Vancouver, ISO, and other styles
15

ಲೋಹಿತ್, ಪಿ. "ಬಂಜಾರರ ಸಾಂಪ್ರದಾಯಿಕ ಸ್ಥಿತ್ಯಂತರ". AKSHARASURYA JOURNAL 05, № 04 (2024): 60 to 68. https://doi.org/10.5281/zenodo.14289830.

Full text
Abstract:
ಜನಪದ ಸಾಹಿತ್ಯವೂ ಆಕಾಶದಷ್ಟೇ ವಿಶಾಲ, ಸಾಗರದಷ್ಟೇ ಆಳ. ಅದರಲ್ಲಿ ಹಲವು ಪ್ರಕಾರಗಳಿವೆ. ಗಾದೆ, ಒಗಟು, ಒಡಪು, ಕಥೆ, ಲಾವಣಿ, ಕಥನಗೀತೆ ಪ್ರಮುಖವಾಗಿವೆ. ಇಡೀ ಜಗತ್ತಿನಲ್ಲಿ ಸಾಹಿತ್ಯದ ಮೂಲವನ್ನೇಲ್ಲಾ ಜನಪದ ಸಾಹಿತ್ಯದಲ್ಲಿ ಕಾಣಬಹುದು. ಹೀಗಾಗಿ ಬಿ.ಎಂ.ಶ್ರೀರವರು ಜನಪದ ಸಾಹಿತ್ಯವನ್ನು ‘ಜನವಾಣಿ ಬೇರು, ಕವಿವಾಣಿ ಹೂವು’ ಎಂದುಕರೆದಿದ್ದಾರೆ. ಈ ನಾಡಿನ ಶ್ರಮ ಸಂಸ್ಕೃತಿಯ ಪ್ರತೀಕವಾದ ಬುಡಕಟ್ಟು ಸಮುದಾಯಕ್ಕೆ ಸೇರಿದ ಲಂಬಾಣಿಗರು ನಂಬಿಕೆಗೆ ಹೆಸರಾದವರು. ನಂಬಿದವರ ಪಾಲಿನ ಅಂಗರಕ್ಷಕರಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಾದರೂ, ಮತ್ತೊಬ್ಬರನ್ನು ಕಾಪಾಡುವ ಗುಣವನ್ನು ಹೊಂದಿದವರು. ತಮ್ಮ ಪ್ರಾಮಾಣಿಕತೆಯಿಂದ ಬದುಕುವ ಇವರು ಸಾಹಸಿಗಳು. ಏಕೆಂದರೆ ಇದೊಂದು ಅಖಿಲ ಭಾರತ ವ್ಯಾಪ್ತಿಯ ಅಲೆಮಾರಿ ಗುಂಪು. ಭಾರತದಲ್ಲಿ ಸುಮಾರು ೮೩೦ ಬುಡಕಟ್ಟುಗಳ
APA, Harvard, Vancouver, ISO, and other styles
16

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
17

ಮಾನಸ, ಪ್ರಿಯದರ್ಶಿನಿ ಹೆಚ್. ಬಿ. "ಸುನಂದಾ ಕಡಮೆ ಅವರ ಕಥೆಗಳಲ್ಲಿ ಮಹಿಳೆ ಮತ್ತು ವೈಚಾರಿಕ ಪ್ರಜ್ಞೆ". AKSHARASURYA JOURNAL 05, № 03 Special Issue (2024): 53 to 60. https://doi.org/10.5281/zenodo.14246514.

Full text
Abstract:
ಸುನಂದಾ ಪ್ರಕಾಶ ಕಡಮೆ ಅವರ ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ ಹಾಗೂ ತುದಿ ಮಡಚಿಟ್ಟ ಪುಟ-ಕಥಾ ಸಂಕಲನಗಳ ಕಥೆಗಳಲ್ಲಿ ಕಂಡುಬರುವ ಸಂಪ್ರದಾಯ, ಆಚರಣೆ, ವೈಚಾರಿಕತೆ ಇವುಗಳನ್ನು ಈ ಲೇಖನದಲ್ಲಿ ವಿವರಣಾತ್ಮಕವಾಗಿ ವಿಶ್ಲೇಷಿಸಲಾಗಿದೆ. ಸುನಂದಾ ಪ್ರಕಾಶ ಕಡಮೆ ಅವರ ಬಹುತೇಕ ಕತೆಗಳ ಧಾತು ಕುಟುಂಬ ಮತ್ತು ಸಮಾಜದೊಳಗೆ ಗಿರಕಿ ಹೊಡೆಯುತ್ತದೆ. ಕುಟುಂಬದೊಳಗೆ ಹುಟ್ಟುವ ಕಥೆ ಸಾಮಾಜಿಕ ಆಯಾಮ ಪಡೆದುಕೊಳ್ಳುತ್ತಾ ಸಮಕಾಲೀನ ಸಮಾಜ, ಮಾನವೀಯ ಸಂಬಂಧಗಳನ್ನು ಕುರಿತು ಚಿಂತಿಸುತ್ತದೆ. ಹಾಗಾಗಿ ಕಥನ ಲೋಕದ ವಿಸ್ತಾರವನ್ನು ತೆರೆದಿಡುವ ಸುನಂದಾ ಪ್ರಕಾಶ ಕಡಮೆ ಅವರ ಕತೆಗಳಲ್ಲಿ ಬಲವಾದ ಆತ್ಮವಿಶ್ವಾಸ ಮತ್ತು ಪ್ರಬುದ್ಧಗೊಂಡ ಕಥನ ಕೌಶಲ್ಯ ಕಾಣುತ್ತದೆ. ಸಂಸಾರ ನಿತ್ಯದ ವಿವರಗಳೇ ಸುನಂದಾ ಅವರ ಬಹುಪಾಲು ಕತೆಗಳ ಇಟ್ಟಿಗೆ, ಮಣ್ಣು, ಗಾರೆ ಇತ
APA, Harvard, Vancouver, ISO, and other styles
18

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
APA, Harvard, Vancouver, ISO, and other styles
19

ಅಜೀತ, ಪಾತ್ರೋಟ, та ರುಮ್ಮಾ ಶಿವಗಂಗಾ. "'ವೀಸಾದ ನಿರೀಕ್ಷಣೆಯಲ್ಲಿ ಆತ್ಮಕಥನ': ಡಾ.ಬಿ.ಆರ್. ಅಂಬೇಡ್ಕರರ ಜೀವನ ಮತ್ತು ಪ್ರಯೋಗಗಳು." AKSHARASURYA 04, № 03 (2024): 78 to 87. https://doi.org/10.5281/zenodo.12672742.

Full text
Abstract:
ಆತ್ಮಕಥೆ ಬರೆದುಕೊಳ್ಳುವುದು ಮನುಷ್ಯ ಬದುಕಿನ ಪ್ರಮುಖ ಬೆಳವಣಿಗೆಯಾಗಿದೆ. ಈ ಕಾರಣವಾಗಿಯೆ ಮನುಷ್ಯ ತನ್ನ ಸರಿ ತಪ್ಪುಗಳನ್ನು ನಿವೇದಿಸಿಕೊಂಡು ಬದುಕಿನ ವಿಕಾಸದತ್ತ ದಾಪುಗಾಲಿಡುವುದು ಕಾಣಬಹುದು. ಮಾನವ ಬೆಳವಣಿಗೆ ಮತ್ತು ವಿಕಾಸ ಕ್ರಮದಲ್ಲಿ ತನ್ನ ಬದುಕಿನ ಅನುಭವಗಳನ್ನು ಮನೆ, ಸಮಾಜ, ಪರಿಸರ, ಸಂಸ್ಕೃತಿಗಳಿಂದ ರೂಪುಗೊಂಡಿವೆ. ಅವುಗಳು ಮನುಷ್ಯ ಒಳ ಹೊರಗನ್ನು ಅರಿತುಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲಿ ಪ್ರಮುಖವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ದುಖಃ ದುಮ್ಮಾನಗಳು, ಸಂಕಟಗಳು ಮತ್ತು ಅವುಗಳಿಂದ ಬಿಡುಗಡೆಗೆ ಹಾತೋರೆಯುವ ಮನಸ್ಥಿತಿ ಪ್ರಕಟಗೊಳ್ಳುತ್ತದೆ. ಅಲ್ಲದೆ ಅವರು ಕಂಡುಕೊಳ್ಳುವ ಪರಿಹಾರೋಪಾಯಗಳು ಎಲ್ಲವೂ ಒಂದೊಂದು ಹೊಸ ಪ್ರಯೋಗದಂತೆ ಗೋಚರಿಸುತ್ತದೆ. ಅಲ್ಲದೆ ಅವು ಓದುಗರಿಗೆ ಸಂದೇಶಗಳಾಗಿ ಮಾರ್ಪಡುತ್
APA, Harvard, Vancouver, ISO, and other styles
20

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ ‘ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ’ ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು ‘ಸತ್ಯಶೋಧಕ ಸಮಾಜ’ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
21

ಪುಟ್ಟಸ್ವಾಮಿ. "ಕುವೆಂಪು ಅವರ ವೈಚಾರಿಕತೆ". AKSHARASURYA JOURNAL 05, № 04 (2024): 115 to 125. https://doi.org/10.5281/zenodo.14289937.

Full text
Abstract:
ಕನ್ನಡ ಸಾಹಿತ್ಯ ಸಂದರ್ಭದಲ್ಲಿ ‘ಕುವೆಂಪು’ ಎನ್ನುವ ಹೆಸರೇ ಒಂದು ವಿಶಿಷ್ಟವಾದ ಕಂಪನ್ನ, ಸೊಂಪನ್ನ ಒಳಗೊಂಡಿದೆ. ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿರುವ ಇವರು ಸೀಮಾಪುರುಪರೆನಿಸಿಕೊಂಡಿದ್ದಾರೆ. ಮುಖ್ಯವಾಗಿ ಅವರ ವೈಚಾರಿಕ ನಿಲುವು ವೈಜ್ಞಾನಿಕ ದೃಷ್ಟಿಯಿಂದ ಪ್ರೇರಿತವಾದದ್ದು. ವೈಚಾರಿಕತೆ ಎಂಬುದು ಬುದ್ಧಿ ಮತ್ತು ಭಾವಗಳ ವಿದ್ಯುದಾಲಿಂಗನ. ಸೂಕ್ಷ್ಮವಾದ ವಿವೇಚನಾಶಕ್ತಿ, ಆಲೋಚನಾಶಕ್ತಿಗಳ ಅಭಿವ್ಯಕ್ತಿಯ ಸಂಗಮ. ವಿವೇಕಪೂರ್ಣವಾದ ವಿವೇಚನೆಯೇ ವೈಚಾರಿಕತೆಯ ತಳಹದಿಯಾಗಿದೆ. ವೈಚಾರಿಕತೆ ಎಂಬುದು ಮೂಲಭೂತ ಮೌಲ್ಯಗಳನ್ನು ನಿರಾಕರಿಸಬಾರದು. ಸತ್ಯವನ್ನು ಶೋಧಿಸುವಾಗ ಭೌತಿಕವಾಗಿ ಕಣ್ಣಿಗೆ ಕಾಣುವ ವಸ್ತುವಿನ ವೈಜ್ಞಾನಿಕ ದೃಷ್ಟಿಯೊಂದೆ ನಿಜವಾಗಲಾರದು. ಅದರ ಜೊತೆಗೆ ಆ ವಸ್ತುವಿನ ಅಂತರಾಳದ ಚೈತನ್ಯಾತ್ಮಕ ಭಾವಲಹರಿಯು ಕೂಡ ಮುಖ್ಯ
APA, Harvard, Vancouver, ISO, and other styles
22

ರೇವತಿ, ಬಿ. ಶಿರನಾಳ. "ಅನುಪಮಾ ನಿರಂಜನ ಮತ್ತು ತ್ರಿವೇಣಿಯವರ ಕಥೆಯಲ್ಲಿ ಮಹಿಳೆಯ ಪಾತ್ರ". AKSHARASURYA JOURNAL 05, № 03 Special Issue (2024): 104 to 110. https://doi.org/10.5281/zenodo.14246680.

Full text
Abstract:
ನಮ್ಮ ನಾಡು ಸುಸಂಸ್ಕೃತವಾದ ತಾಣ ನಮ್ಮ ಮಹಾಕಾವ್ಯವಾದ “ರಾಮಾಯಣದಲ್ಲಿ” ಒಂದು ಶ್ಲೋಕ ಬರುತ್ತದೆ ಅದು “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸೀ” ಅಂತ ಸಂಸ್ಕೃತ ಶ್ಲೋಕ ತಾತ್ಪರ್ಯ ನೋಡುವುದಾದರೆ “ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತ ದೊಡ್ಡದು” ಎಂದು ಅರ್ಥ. ಇದನ್ನು ಅರಿತ ಸ್ತ್ರೀ ನಮ್ಮ ಸಮಾಜದಲ್ಲಿ ಪುರುಷರಿಗೆ ಗೌರವಿಸುವುದು. ಒಂದು ಧರ್ಮ ಮತ್ತು ಕರ್ತವ್ಯ. ಹಾಗಾಗಿ ನಮ್ಮ ಸಮಾಜ ಪುರುಷ ಪ್ರಧಾನವಾಗಿ ನೋಡುತ್ತದೆ. ಸಹಜವಾಗಿ ಸ್ತ್ರೀಯು ಕೂಡಾ ಪ್ರಧಾನವಾಗಿ ನೋಡುವುದು ಅವಳ ವಿಶಾಲ ಮನೋಭಾವವಾಗುತ್ತದೆ. ಜೊತೆಗೆ ಕುಟುಂಬವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವ ಆದ್ಯ ಕರ್ತವ್ಯಗಳನ್ನು ಈ ಕಥೆಗಳಲ್ಲಿ ನಾವು ಕಾಣುತ್ತೇವೆ. ತನ್ನ ಆಸೆ ಆಕಾಂಕ್ಷೆಗಳು ಬದಿಗೆ ಸರಿಸಿ ತನ್ನ ಪರಿವಾರವನ್ನು ಪ್ರೀತಿ, ಮಮತೆ
APA, Harvard, Vancouver, ISO, and other styles
23

ಡಾ., ಸ್ವಾಮಿ. "ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳ ಪರಿಚಯ". International Journal of Advance Research in Multidisciplinary 2, № 3 (2024): 258–61. https://doi.org/10.5281/zenodo.13292327.

Full text
Abstract:
ಭಾರತದ ಪ್ರತಿಯೊಂದು ರಾಜ್ಯಗಳು ಸಹ ವಿವಿಧ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಪ್ರತ್ಯೇಕವಾದ ನಿಗಮವನ್ನು ಸ್ಥಾಪಿಸಿವೆ. ಅಂಥ ನಿಗಮಗಳು ರಾಜ್ಯ ಸರ್ಕಾರಗಳ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದ್ದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ಅಳವಡಿಸಿಕೊಂಡು ಅವುಗಳ ಅನುಷ್ಠಾನಕ್ಕಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಬರುತ್ತಿವೆ. ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಯ ಜನರ ಸರ್ವತೋಮುಖ ಅಭಿವೃದ್ಧಿಗೆÀ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮವನ್ನು ೨೦-೦೩-೧೯೭೫ರಂದು ಸ್ಥಾಪಿಸಲಾಗಿದೆ. ದಿನಾಂಕ ೧೬-೦೮-೨೦೦೫ ರಂದು ‘ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ’ ಎಂದು ಮರುನಾಮಕರಣ ಮಾಡಲ್ಪಟ್ಟಿದೆ. ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾಗಿ ಡಾ.ಬಿ.ಆರ್.ಅಂಬೇ
APA, Harvard, Vancouver, ISO, and other styles
24

ಎಂ., ಮಹಾದೇವಪ್ರಭು. "ತಿರುಕ ಅವರ ಜೀವನ ಮತ್ತು ಸಾಹಿತ್ಯ: ಒಂದು ಪಕ್ಷಿನೋಟ". AKSHARASURYA JOURNAL 03, № 04. SPECIAL ISSUE. (2024): 106 to 114. https://doi.org/10.5281/zenodo.10929831.

Full text
Abstract:
ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳು ಮೂಲತಃ ವ್ಯಾಯಾಮ ಶಿಕ್ಷಕರು, ಅವರು ತಿರುಕ ಎಂಬ ಕಾವ್ಯನಾಮದಿಂದ ಕನ್ನಡ ಸಾಹಿತ್ಯ ವಲಯದಲ್ಲಿ ಪ್ರಸಿದ್ಧರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮಲ್ಲಾಡಿಹಳ್ಳಿಯಲ್ಲಿ ಶಿಕ್ಷಣ, ವೈದ್ಯಕೀಯ, ವ್ಯಾಯಾಮ, ಗ್ರಂಥಾಲಯ, ವಾಚನಾಲಯ, ವಿದ್ಯಾರ್ಥಿ ನಿಲಯಗಳಿಂದ ಕೂಡಿದ ಅನಾಥ ಸೇವಾಶ್ರಮ ವಿಶ್ವಸ್ಥ ಸಮಿತಿ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಸುತ್ತಮುತ್ತಲ ಹಳ್ಳಿಗಳ ವಿದ್ಯಾರ್ಥಿಗಳಿಗೆ ವಿದ್ಯಾದೀಪಕರಾಗಿದ್ದಾರೆ. ಆಯುರ್ವೇದ, ಯೋಗ ಮತ್ತು ಸಾಹಿತ್ಯವಲಯದ ವಿದ್ವಾಂಸರನ್ನು ಮಲ್ಲಾಡಿ ಹಳ್ಳಿಗೆ ಕರೆಸಿ ವಿದ್ಯಾರ್ಥಿಳಿಗೆ ಉಪನ್ಯಾಸಗಳನ್ನು ಕೊಡಿಸುವುದಲ್ಲದೆ, ಜನರಿಗೆ ಹರಿಕಥೆ, ಕೀರ್ತನೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಸಿದ್ಧರಾಗಿರುವರು. ಶ್ರೀಯುತರು 53 ಕೃತಿಗಳನ್ನು ಬರೆದಿದ್ದರೂ ಕೂಡ ಆಧುನಿಕ ಜನಮಾನಸಕ್ಕೆ ಅಪರಿಚ
APA, Harvard, Vancouver, ISO, and other styles
25

ರೇಣುಕಮ್ಮ, ಜೆ. "ಮಾಸ್ತಿ ವೆಂಕಟೇಶ ಅಯ್ಯಂಗಾರರ ಸಣ್ಣ ಕಥೆಗಳಲ್ಲಿನ ಕೌಟುಂಬಿಕ ಸಫಲತೆ". AKSHARASURYA 05, № 01 (2024): 104 to 113. https://doi.org/10.5281/zenodo.13870938.

Full text
Abstract:
ಸಣ್ಣ ಕತೆಗಳ ಜನಕ ಎಂದೇ ಪ್ರಸಿದ್ಧರಾದವರು ಮಾಸ್ತಿ ವೆಂಕಟೇಶ ಅಯ್ಯಂಗಾರರು. ಶ್ರೀನಿವಾಸ ಎಂಬ ಕಾವ್ಯನಾಮದಿಂದ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಅವರ ಕೆಲವು ಸಣ್ಣ ಕಥೆಗಳಲ್ಲಿ ಬರುವ ಕೌಟುಂಬಿಕ ಸಫಲತೆಯನ್ನು ಶೋಧಿಸುವ ಪ್ರಯತ್ನವೇ ಈ ಲೇಖನದ ಉದ್ಧೇಶ. ‘ರಂಗನ ಮದುವೆ’ ಯಿಂದ ಹಿಡಿದು ಮಾಯಣ್ಣನ ಕನ್ನಡಿ ತನಕ ಅವರ ಸಣ್ಣ ಕಥೆಗಳಲ್ಲಿ ಕಾಣುವುದು ಸಾಮಾನ್ಯ ಘಟನೆಗಳನ್ನು ಮತ್ತು ಉತ್ಪ್ರೇಕ್ಷೆಯಿಲ್ಲದೆ ನಿರೂಪಿಸುವ ಶೈಲಿಯನ್ನು. ‘ವೆಂಕಟಿಗನ ಹೆಂಡತಿ’ಯಲ್ಲಿ ನೀತಿ ತಪ್ಪಿದ ಹೆಂಡತಿಯನ್ನು ಮತ್ತೆ ಅನುಕಂಪದಿಂದ ಸ್ವೀಕರಿಸುವ ಕಟ್ಟಿಗೆ ಮಾರುವ ವೆಂಕಟಿಗನಿಂದ ಹಿಡಿದು ಕರ್ಮಯೋಗದ ಕೊನೆಯದಿನದಲ್ಲಿ ನಿರ್ಲಿಪ್ತರಾಗಿ ಬೆಳಕಿನ ಲೋಕಕ್ಕೆ ತೆರಳಿದ ಮಹ಼ರ್ಷಿ ವಾಮದೇವ ದ್ವೈಪಾಯನರವರೆಗೆ ಎಲ್ಲಾ ಪಾತ್ರಗಳ ಜೀವನವನ್ನು ಚಿತ್ರಿಸಿರುವುದು ಸಹ
APA, Harvard, Vancouver, ISO, and other styles
26

ಚಿಕ್ಕಮಗಳೂರು, ಗಣೇಶ. "ವರ್ತಮಾನದ ಕನ್ನಡಿಯಲ್ಲಿ ಕನಕ ದರ್ಶನ". AKSHARASURYA JOURNAL 04, № 05 Special Issue (2024): 06 to 16. https://doi.org/10.5281/zenodo.13294272.

Full text
Abstract:
ಭಕ್ತಿಯ ಖಾಸಗಿ ವಿಚಾರಗಳನ್ನು ಸಮಾಜ ಸುಧಾರಣೆಗೆ ಮಾಧ್ಯಮವಾಗಿ ಬಳಸಿಕೊಂಡ ಕನಕದಾಸರು ಕನ್ನಡ ನಾಡಿನ ಅನನ್ಯ ಭಕ್ತಿ ಕವಿ. ಅವರು ವಾಸಿಸುತ್ತಿದ್ದ ಮಧ್ಯಕಾಲೀನ ಅವಧಿಯು ಸಂಕೀರ್ಣವಾಗಿತ್ತು. ಇದು ಧರ್ಮ ಮತ್ತು ಆಡಳಿತದ ನಡುವಿನ ತೀವ್ರ ಸಂಘರ್ಷದ ಅವಧಿ. ಅಲ್ಲಿ ಅವರು ಹರಿದಾಸ ಚಳವಳಿಯ ಮುಖವಾಣಿಯಾಗಿ ನಮ್ಮನ್ನು ಭೇಟಿಯಾಗುತ್ತಾರೆ. ಆ ಚಳವಳಿಯ ತತ್ತ್ವಶಾಸ್ತ್ರವು ಮೇಲ್ನೋಟಕ್ಕೆ ಉದಾರವಾದದ್ದಾಗಿತ್ತು. ಆಂತರಿಕವಾಗಿ ದೋಷಯುಕ್ತ, ತಾರತಮ್ಯ ಮತ್ತು ಅಸಮ ನೆಲ. ಕನಕನೂ ತನ್ನ ಹಿನ್ನಲೆಯಲ್ಲಿ ಇಟ್ಟುಕೊಂಡಿರುವ ಎಲ್ಲ ಸೈದ್ಧಾಂತಿಕ ಗೊಂದಲಗಳಲ್ಲಿ ಸಿಲುಕಿಕೊಳ್ಳುತ್ತಾನೆ. ವ್ಯಾಸಕೂಟ ಮತ್ತು ದಾಸಕೂಟಗಳು ತಾತ್ವಿಕ ಸಂಘರ್ಷದ ನಡುವೆ ತಮ್ಮನ್ನು ತಾವು ಪ್ರತಿಪಾದಿಸಲು ಹೆಣಗಾಡುತ್ತವೆ.  ಚಳವಳಿಯ ಪರಿಸರದಲ್ಲೂ ಅಪಾರ ಒಂಟಿತನ ಅನುಭವಿಸಿದ ಕವಿ. ಇದಕ್ಕೆ ಕಾರಣವೆ
APA, Harvard, Vancouver, ISO, and other styles
27

ಗೀತಾ, ಎ.ಸಿ. "ಅಕ್ಕಮಹಾದೇವಿಯ ವಚನಗಳಲ್ಲಿ ಸ್ತ್ರೀ ಚಿಂತನೆಗಳು". AKSHARASURYA JOURNAL 06, № 04 (2025): 42 to 48. https://doi.org/10.5281/zenodo.15490848.

Full text
Abstract:
ಹನ್ನೆರಡನೆಯ ಶತಮಾನವೆಂದರೆ; ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಬದಲಾವಣೆಗೊಂಡ ಕಾಲ. ಅದನ್ನು ಕ್ರಾಂತಿ ಎಂದೇ ಕರೆಯಬೇಕಾಗುತ್ತದೆ. ಹಿಂದೆ ಸಮಾಜದಲ್ಲ್ಲಿದ್ದ ಅಸಮಾನತೆ, ಶೋಷಣೆಗಳನ್ನು ಕಂಡು ಅನುಭವಿಸಿದ್ದ ಶರಣ, ಶರಣೆಯರು ಮೇಲು-ಕೀಳು ಸ್ತ್ರೀ-ಪುರುಷ ಇತ್ಯಾದಿ ಭೇದ ರಹಿತವಾದ ವರ್ಗರಹಿತವಾದ ಸಮಾಜವನ್ನು ಕಟ್ಟಲು ಪ್ರಯತ್ನಿಸಿದರು. 12ನೇ ಶತಮಾನದ ಪ್ರಸಿದ್ಧ ವಚನಕಾರ್ತಿ ಅಕ್ಕಮಹಾದೇವಿ. ಬಸವಣ್ಣನವರ ಸಮಕಾಲೀನಳಾಗಿ ಬದುಕಿದಳು. ಈಕೆ ಶಿವಶರಣೆಯಾಗಿ, ವಚನಕಾರ್ತಿಯಾಗಿ, ಚೆನ್ನಮಲ್ಲಿಕಾರ್ಜುನನ ಭಕ್ತೆಯಾಗಿ ಪ್ರಸಿದ್ಧಳಾದವಳು. ಈಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಎಂಬ ಗ್ರಾಮದಲ್ಲಿ ನಿರ್ಮಲ ಮತ್ತು ಸುಮತಿಯರ ಮಗಳಾಗಿ ಜನಿಸಿದಳು. ಬಾಲ್ಯದಲ್ಲೇ ಶಿವಭಕ್ತಿಯನ್ನು ಹೊಂದಿದ್ದ ಈಕೆಗೆ ಶಿವಪೂಜೆ ಶಿವಧ್ಯಾನಗಳೇ
APA, Harvard, Vancouver, ISO, and other styles
28

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Full text
Abstract:
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
APA, Harvard, Vancouver, ISO, and other styles
29

ಷಾಕಿರಾ, ಖಾನಂ. "ಕನ್ನಡ ಚಿತ್ರರಂಗದಲ್ಲಿ ಮಹಿಳೆ". AKSHARASURYA 05, № 01 (2024): 124 to 127. https://doi.org/10.5281/zenodo.13870982.

Full text
Abstract:
ಸಿನಿಮಾ ವಿವಿಧ ಮಜಲುಗಳನ್ನು ದಾಟುತ್ತಾ ಸಮಾಜದ ವಿವಿಧ ಸಮಸ್ಯೆಗಳನ್ನು ಮುನ್ನೆಲೆಗೆ ತಂದು ಸಾಮಾಜಿಕ ಪರಿವರ್ತನೆ ಮಾಡುವ ಉದ್ದೇಶದಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿತಾದರೂ ಬರು ಬರುತ್ತಾ ಅದರ ಗುರಿ ಮನೋರಂಜನೆಯತ್ತ ತಿರುಗಿ ಮಹಿಳೆಯನ್ನು ಒಂದು ವಸ್ತುವನ್ನಾಗಿಸಿ ಮಹಿಳೆಯ ಚಾರಿತ್ರ್ಯವನ್ನೇ ಬಂಡವಾಳವನ್ನಾಗಿಸಿ ಮಹಿಳೆಯ ಸ್ಥಾನಮಾನಕ್ಕೆ ಚ್ಯುತಿ ಬರುವಂತೆ ಮಾಡಿತು.
APA, Harvard, Vancouver, ISO, and other styles
30

GEETHA, A. C. "`ಅಮ್ಮ'ನವರ ಆರಾಧನೆಯಲ್ಲಿನ ಸಾಂಸ್ಕೃತಿಕ ಅನನ್ಯತೆ". AKSHARASURYA JOURNAL 03, № 03 (2024): 63 to 70. https://doi.org/10.5281/zenodo.10775087.

Full text
Abstract:
ಜನಪದರಲ್ಲಿ ಆರಾಧನೆ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಿದೆ. ಆಚಾರ-ವಿಚಾರ, ನಂಬಿಕೆಗಳಿಂದ ಕೂಡಿರುವ ಆರಾಧನೆಯು ಇಷ್ಟಾರ್ಥ ಸಿದ್ಧಿಯ ನೆಲೆಯಲ್ಲಿ ಮಹತ್ವವನ್ನು ಪಡೆಯುತ್ತದೆ. ಭಯದಿಂದ ಮುಕ್ತವಾಗಲು ಕಷ್ಟ ಪರಿಹಾರವಾಗಲು ದೇವರುಗಳ ಮೊರೆ ಹೋಗುವುದು ಜನಪದರ ಬಹುಮುಖ್ಯ ಚಟುವಟಿಕೆ. ತಮಗೆ ಎದುರಾದ ಕಷ್ಟಗಳನ್ನು ರೋಗರುಜಿನಗಳನ್ನು ನಂಬಿಕೆ, ವಿಶ್ವಾಸಕ್ಕೆ ಪಾತ್ರರಾಗಿರುವ ಪ್ರೀತಿಯ ವ್ಯಕ್ತಿಗಳಲ್ಲಿ ಹೇಳಿಕೊಂಡು ಮನೋಭಾರವನ್ನು ಕಳೆದುಕೊಳ್ಳಲು ಸಾಧ್ಯವಾಗುವುದಿಲ್ಲ. ತಮ್ಮತಮ್ಮಲ್ಲೇ ಎಷ್ಟೇ ಕಷ್ಟಗಳನ್ನು ತೋಡಿಕೊಂಡರೂ ಸಮಾಧಾನ ಅನ್ನಿಸುವುದಿಲ್ಲ. ಅಂದರೆ ಮನುಷ್ಯರ ಶಕ್ತಿಗೆ ಒಂದು ಮಿತಿ ಎನ್ನುವುದು ಇದೆ. ಎಲ್ಲವೂ ಮನುಷ್ಯರ ಕೈಯಿಂದ ಅಸಾಧ್ಯ ಎಂಬ ವಿಚಾರವನ್ನು ಜನಪದರು ನಂಬಿದ್ದಾರೆ. ಮಾನವನ ಶಕ್ತಿಗಿಂತ ಮಿಗಿಲಾದ ಶಕ್ತಿ ಇದೆ ಎಂದು ನಂಬುವ ಜನಪದರು, ಆ ಶ
APA, Harvard, Vancouver, ISO, and other styles
31

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
32

ಮಲ್ಲಯ್ಯ, ಸಂಡೂರು. "ಆಧುನಿಕ ಕನ್ನಡ ಸಾಮಾಜಿಕ ನಾಟಕಗಳು: ವಾಸ್ತವಿಕ ಪ್ರಜ್ಞೆಯ ನೆಲೆಗಳು". AKSHARASURYA 05, № 01 (2024): 59 to 66. https://doi.org/10.5281/zenodo.13870729.

Full text
Abstract:
ಉತ್ತರ ಕನ್ನಡ ಜಿಲ್ಲೆಯ ಪ್ರಾದೇಶಿಕತೆಯ ಕಥಾಹಂದರವನ್ನು ಒಳಗೊಂಡಿರುವ ‘ಇಗ್ಗಪ್ಪ ಹೆಗ್ಗಡೆಯ ಪ್ರಹಸನ’ (1887) ನಾಟಕ ವಾಸ್ತವಿಕತೆಯನ್ನು ಕುರಿತು ಚರ್ಚಿಸುವಾಗ ಮುನ್ನೆಲೆಗೆ ಬರುತ್ತದೆ. ಉತ್ತರ ಕನ್ನಡದ ಜನರ ಸಾಮಾಜಿಕ ಹಿನ್ನೆಲೆಯಲ್ಲಿ ರಚಿತವಾದ ಈ ನಾಟಕವನ್ನು ವಾಸ್ತವಿಕ ರಂಗಭೂಮಿಯ ಪ್ರಪ್ರಥಮ ಸ್ವತಂತ್ರ ಕೃತಿ ಎನ್ನುವುದುಂಟು. ಇಳಿಯ ವಯಸ್ಸಿನ ಹವ್ಯಕ ಬ್ರಾಹ್ಮಣ ಇಗ್ಗಪ್ಪ ಹೆಗಡೆಯ ವಿಷಮ ವಿವಾಹ, ಅದರ ದುರಂತತೆ ಈ ನಾಟಕದ ವಸ್ತು. ಸ್ವತಂತ್ರವಾದ ಸಾಮಾಜಿಕ ವಸ್ತುವನ್ನು ಒಳಗೊಂಡು, ಅಪ್ಪಟ ಆಡುಮಾತನ್ನೇ ಬಳಸಿಕೊಂಡು ಬರೆದ ಈ ನಾಟಕ ಒಂದು ನೈಜವಾದ ಸಾಮಾಜಿಕ ಚಿತ್ರಣದಿಂದ ಕೂಡಿದೆ.  ಕನ್ನಡ ನಾಟಕದಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಮೂಡಿಸಿ ಹೊಸ ಯುಗವನ್ನೇ ಸೃಷ್ಟಿಸಿದ ಕೀರ್ತಿ ಟಿ. ಪಿ. ಕೈಲಾಸ ಹಾಗೂ ಶ್ರೀರಂಗರಿಗೆ ಸಲ್ಲುತ್ತದೆ. ಇ
APA, Harvard, Vancouver, ISO, and other styles
33

ಸುಮಾ, ವಸಂತ ಸಾವಂತ. "ಚಾಜ ನಾಟಕದಲ್ಲಿ ಮಹಿಳಾ ಸಂವೇದನೆ". AKSHARASURYA 05, № 02 (2024): 123 to 130. https://doi.org/10.5281/zenodo.14035359.

Full text
Abstract:
ಆಧುನಿಕ ಸಾಹಿತ್ಯದ ಸಂದರ್ಭದಲ್ಲಿ ಮಹಿಳೆಯರು ಕಥೆ-ಕಾದಂಬರಿ ಪ್ರಕಾರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ್ದಾರೆ. ಆದರೆ ರಂಗಭೂಮಿಯಲ್ಲಿ ನಾಟಕರಚನೆಗೆ ಸಂಬಂಧಿಸಿದಂತೆ ಅಂತಹ ದೊಡ್ಡಸಾಧನೆ ಕಾಣಿಸುವುದಿಲ್ಲ. ಆದರೆ ಇತ್ತೀಚಿನ ದಶಕಗಳಲ್ಲಿ ಮಹಿಳೆ ಅನೇಕ ಮಹತ್ವದ ನಾಟಕ ಕೃತಿಗಳನ್ನು ಕೊಟ್ಟಿದ್ದಾಳೆ. ಅಂತಹ ನಾಟಕಗಳಲ್ಲಿ ಚಾಜ ನಾಟಕವು ಒಂದಾಗಿದೆ. ಹಿಂದಿನ ಕಾಲದಿಂದಲೂ ಪುರುಷ ಪ್ರಧಾನತೆ, ಸಾಮ್ರಾಜ್ಯಶಾಹಿಗಳು, ಮತ್ತು ಪುರೋಹಿತಶಾಹಿತ್ವಗಳು ಎಲ್ಲವೂ ಒಟ್ಟಾಗಿಯೇ ಮಹಿಳೆಯರ ಮೇಲೆ ಹಲವಾರು ಕಟ್ಟುಪಾಡುಗಳನ್ನು ಹೊರಿಸಿವೆ. ಹೆಣ್ಣು ಭೋಗದ ವಸ್ತು ಎಂದು ಪುರುಷಪ್ರಧಾನ ವ್ಯವಸ್ಥೆಯು ಭಾವಿಸುತ್ತದೆ. ಪುರುಷನ ಅಧಿಕಾರತ್ವದಿಂದ ಅವನೇ ಹುಟ್ಟು ಹಾಕಿದ ಧರ್ಮ, ನಿಯಮಗಳು, ಗೊಡ್ಡು ಸಂಪ್ರದಾಯಗಳು, ಕಟ್ಟುಪಾಡುಗಳು ಹೆಣ್ಣನ್ನು ನಿರ್ದಾಕ್ಷಿಣ್ಯವಾಗಿ ನಡೆಸಿಕೊಳ್ಳುತ್ತವೆ.
APA, Harvard, Vancouver, ISO, and other styles
34

ಭೀಮಣ್ಣ, ಎಚ್. "ಕಾದಂಬರಿ ಸಾಹಿತ್ಯ: ಒಂದು ಅವಲೋಕನ". AKSHARASURYA 05, № 02 (2024): 131 to 134. https://doi.org/10.5281/zenodo.14035373.

Full text
Abstract:
ಇಂಕು, ಕಾಗದ, ಸಾಕಷ್ಟು ವಿರಾಮ ಮತ್ತು ತಾಳ್ಮೆಗಳಿದ್ದರೆ ಯಾರು ಬೇಕಾದರೂ ಕಾದಂಬರಿ ಬರೆಯಬಹುದು ಎಂದು ಅಧ್ಯಯನದಿಂದ ತಿಳಿದು ಬರುತ್ತದೆ. ಕಾದಂಬರಿ ಸಾಹಿತ್ಯವನ್ನು “ಕರತಲ ರಂಗಭೂಮಿ” ಎಂದು ಹಿಂದಿನ ಕಾಲದಿಂದಲೂ ಕರೆದುಕೊಂಡು ಬರಲಾಗುತ್ತಿದೆ. ಕಾದಂಬರಿಯಲ್ಲಿ ಪಾತ್ರಗಳ ಸಂಭಾಷಣೆ, ಶೈಲಿ, ಜೀವನದ ಬಗೆಗಿನ ಒಂದು ನಿಶ್ಚಿತ ದೃಷ್ಟಿಕೋನ, ಬದುಕಿನ ಹಲವು ಸಮಸ್ಯೆಗಳು ನಿರೂಪಿಸಲ್ಪಟ್ಟಿರುತ್ತವೆ.
APA, Harvard, Vancouver, ISO, and other styles
35

ರಶ್ಮಿ, ಪಿ. "ಗೊರೂರರ 'ವೈಯ್ಯಾರಿ' ಕಥಾಸಂಕಲನದಲ್ಲಿನ ಮಹಿಳಾ ಪಾತ್ರಗಳು". AKSHARASURYA JOURNAL 05, № 03 Special Issue (2024): 76 to 83. https://doi.org/10.5281/zenodo.14246574.

Full text
Abstract:
ಆಧುನಿಕ ಕನ್ನಡ ಸಾಹಿತ್ಯದ ನವೋದಯ ಕಾಲಘಟ್ಟದಲ್ಲಿ ಕಥಾಪ್ರಕಾರದಲ್ಲಿ ಸಾಧನೆ ಮಾಡಿದ ಹಿರಿಯ ಕಥೆಗಾರರ ಪೈಕಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ರವರು ಒಬ್ಬರು. ಇವರ 140ಕ್ಕೂ ಹೆಚ್ಚಿನ ಕಥೆಗಳು ಆರು ಕಥಾ ಸಂಕಲನಗಳಲ್ಲಿ ಹರಡಿಕೊಂಡಿವೆ. ಇವರ ‘ವೈಯ್ಯಾರಿ’ ಕಥಾ ಸಂಕಲನದಲ್ಲಿನ ‘ಭೂತಯ್ಯನ ಮಗ ಅಯ್ಯು’, ‘ಗಂಡುಬೀರಿ ಹೊಸಬಿ’, ‘ಪುಟ್ಟ ಮಲ್ಲಿಗೆ’, ‘ಈಡಿಗರ ಹೆಣ್ಣು’, ‘ಲಕ್ಕಿಯ ಗಂಡಂದಿರು’ ಎಂಬ ಕಥೆಗಳ ವ್ಯಾಪ್ತಿಯಲ್ಲಿ ಬರುವ ಮಹಿಳಾ ಪಾತ್ರಗಳನ್ನು ವಿವೇಚನೆ ಮಾಡುವುದು ಪ್ರಸ್ತುತ ಲೇಖನದ ಉದ್ದೇಶ. ಕೌಟುಂಬಿಕ ಜೀವನದಲ್ಲಿ ತಾಯಿಯಾಗಿ, ಸೊಸೆಯಾಗಿ, ಮಗಳಾಗಿ ಎಲ್ಲಾ ಅವಸ್ಥೆಗಳಲ್ಲಿ ತನ್ನ ಅಸ್ಮಿತೆಯ ಮುದ್ರೆಯನ್ನು ಒತ್ತುವ ಮಹಿಳೆ ಸಮಾಜದಲ್ಲಿ ತನ್ನ ಸ್ವಾತಂತ್ರ್
APA, Harvard, Vancouver, ISO, and other styles
36

ಪಂಪಾಪತಿ, ವಿ. "ಮಾರಾಟದ ಸರಕಾಗಿರುವ ಹೆಣ್ಣಿನ ದೇಹ: ವೇಶ್ಯಾವಾಟಿಕೆಯ ಹಿನ್ನೆಲೆ". International Journal of Advance Research in Multidisciplinary 2, № 3 (2024): 310–14. https://doi.org/10.5281/zenodo.13318294.

Full text
Abstract:
ಸಾವಿರಾರು ವರ್ಷಗಳಿಂದ ಗಂಡಸರು ಹೆಣ್ಣಿನ ಬದುಕನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ. ಮಕ್ಕಳನ್ನು ಹೆರಲು ಹೆಂಡತಿ ಬೇಕು, ದೈಹಿಕ ಸುಖ ಪಡೆಯಲು ವ್ಯಭಿಚಾರಿಣಿ ಬೇಕು, ಆಧ್ಯಾತ್ಮಿಕ ಸುಖ ಪಡೆಯಲು ಸ್ತ್ರೀ ಕಲಾವಿದೆ ಬೇಕು. ಪುರುಷನ ಜೀವನದಲ್ಲಿ ಮಹಿಳೆಯ ಸ್ಥಾನದ ಸಂದರ್ಭದಲ್ಲಿ ಇದು ವ್ಯಕ್ತವಾಗುತ್ತದೆ. ದೈಹಿಕ ಸುಖದ ತೃಪ್ತಿಗಾಗಿ ಹೆಣ್ಣನ್ನು ಮಾರಾಟದ ವಸ್ತುವನ್ನಾಗಿ ಪರಿವರ್ತಿಸುವ ಆಲೋಚನೆಯು ಸೋಮಾರಿ, ಸೋಮಾರಿ ಮತ್ತು ಭೋಗವಾದಿ ಸಮಾಜದ ಫಲವತ್ತಾದ ಮನಸ್ಸಿನಿಂದ ಬರುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಸುಖಕರ, ನಿರ್ಮಲ ಜೀವನ ಸಾಧ್ಯವಾದರೆ ವೈವಾಹಿಕ ನೈತಿಕತೆಯಂತಹ ನಿರ್ಬಂಧಗಳನ್ನು ಹೇರಲಾಗುತ್ತಿತ್ತು. ನಂತರ, ಸೋಮಾರಿತನ ಮತ್ತು ಅವಲಂಬನೆಯ ಜೀವನದಲ್ಲಿ ಉದ್ಭವಿಸಿದ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಈ ಕೃತಕ ನಿರ್ಬಂಧಗಳನ್ನು ರಚಿಸಲಾಯಿತು, ಆದರೆ ನಂತ
APA, Harvard, Vancouver, ISO, and other styles
37

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
38

ಗೌಡ., ಎಂ.ಟಿ. "ವಚನ ಸಾಹಿತ್ಯ: ಮಾನವ ಮೌಲ್ಯಗಳ ಪ್ರತಿಬಿಂಬ". AKSHARASURYA JOURNAL 06, № 04 (2025): 90 to 96. https://doi.org/10.5281/zenodo.15490961.

Full text
Abstract:
ವಚನವೆಂಬುದು ಕೇವಲ ಸಾಹಿತ್ಯ ಪ್ರಕಾರವಲ್ಲ ಅದು ಒಂದು ಚಳುವಳಿ ಕೂಡ ಆಗಿದೆ. ಅದನ್ನು ಸಮಾಜೋ ಧಾಶ್ರಮಿಕ ಚಳುವಳಿ, ಕಾಯಕ ಜೀವಿಗಳ, ಚಳುವಳಿ ಪರಿಪೂರ್ಣ ಚಳುವಳಿ ಎಂದು ಬಗೆಬಗೆಯಾಗಿ ಕನ್ನಡ ವಿದ್ವಾಂಸರು ಅದರ ಸ್ವರೂಪ ಮಹಿಮೆಯನ್ನು ಬಣ್ಣಿಸಿದ್ದಾರೆ. ವಚನ ಸಾಹಿತ್ಯ ಇಡೀ ಭಾರತೀಯ ಭಾಷೆಗಳಲ್ಲಿಯೇ ವಿಶಿಷ್ಟವಾದುದು. ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆ ಆದಾಗಿದೆ ಎಂದರೂ ನಡೆಯುತ್ತದೆ. ಮಾನವ ಕುಲದ ಸರ್ವಾಂಗೀಣ ವಿಕಾಸಕ್ಕಾಗಿ ಶ್ರಮಿಸಿದ ಮಹಾತ್ಮರಾದ ಶಿವಶರಣರು ಅನನ್ಯ ಕೊಡುಗೆ ನೀಡಿರುವ ಜಗತ್ತಿನ ಅಪರೂಪದ ಸಾಹಿತ್ಯ ವಚನಗಳು. ವಚನಗಳು ಎಂದಾಕ್ಷಣ ನೆನಪಾಗುವುದೇ ಶಿವಶರಣರು. ಶರಣ ಪಂಥಕ್ಕೆ ಭಕ್ತಿಯ ಶಕ್ತಿಯೇ ಕೇಂದ್ರ ಬಿಂದು. ವಚನ ಸಾಹಿತ್ಯವು ಸವಿಸ್ತಾರವಾದ ಸಮುದ್ರದ ಆಳದಲ್ಲಿನ ಮುತ್ತು, ರತ್ನಗಳನ್ನು ಹೆಕ್ಕಿ ಅಳೆದು, ತೂಗಿ ಸ
APA, Harvard, Vancouver, ISO, and other styles
39

ನಿಕಿತಾ, ರಮೇಶ ಚನ್ನಾಳೆ, та ಚಿಂತಾಮಣಿ ಮಹೇಶ. "ಕನ್ನಡ ಲಲಿತ ಪ್ರಬಂಧಗಳಲ್ಲಿ ಮಾನವೀಯ ಮೌಲ್ಯಗಳು". Aksharasurya Journal 05, № 05 (2025): 121 to 127. https://doi.org/10.5281/zenodo.14619654.

Full text
Abstract:
ಕನ್ನಡ ಸಾಹಿತ್ಯದ ಅನೇಕ ಬರಹಗಳು ಸಮಾನತೆ, ಸ್ತ್ರೀವಾದ, ವಾಸ್ತವತೆ, ಸಮಾಜಿಕ ದೃಷ್ಟಿಕೋನ, ಕಲ್ಪನೆ ಹೀಗೆ ಅನೇಕ ವಿಷಯಗಳ ಬಗೆಗೆ ಬೆಳಕು ಚಲ್ಲಿವೆ. ಅದೇ ರೀತಿಯಲ್ಲಿ ಲಲಿತ ಪ್ರಬಂಧಗಳು ಕೂಡ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿವೆ. ಲಲಿತ ಪ್ರಬಂಧಗಳು ಕೂಡ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿವೆ. ಮೌಲ್ಯಗಳಿಲ್ಲದೆ ಇದ್ದರೆ ಅದು ಸಾಹಿತ್ಯವಲ್ಲ. ಹಾಗಾಗಿ ಯಾವುದೇ ಸಾಹಿತ್ಯ ಮಾನವೀಯ ಮೌಲ್ಯಗಳು ಪ್ರಮುಖವಾಗಿ ಒಳಗೊಂಡಿರಲೇಬೇಕು. ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ ಎ.ಎನ್. ಮೂರ್ತಿರಾವ್ ಅವರ ಪ್ರಬಂಧಗಳು ಮತ್ತು ಭುವನೇಶ್ವರಿ ಹೆಗಡೆಯವರ ಲಲಿತ ಪ್ರಬಂಧಗಳು ಮಾನವೀಯ ಮೌಲ್ಯಗಳನ್ನು ಬಿತ್ತರಿಸಿವೆ. ಧಾರ್ಮಿಕ, ಸಮಾಜಿಕ, ಮಾನವೀಯ ಮೌಲ್ಯಗಳು ಬದುಕಿನ ಮೆಟ್ಟಿಲೇರಲು ಮೌಲ್ಯಗಳು ಪ್ರಮುಖವಾಗಿವೆ. ಮೌಲ್ಯಗಳು ಉತ್ತಮ ಸಮಾಜವನ
APA, Harvard, Vancouver, ISO, and other styles
40

ತೇಜಾವತಿ, ಕೆ. "ಕುವೆಂಪುರವರ ಜಲಗಾರ ನಾಟಕ". AKSHARASURYA JOURNAL 05, № 06 (2025): 83 to 91. https://doi.org/10.5281/zenodo.14788756.

Full text
Abstract:
ರಾಷ್ಟ್ರಕವಿ ಕುವೆಂಪುರವರು ಕನ್ನಡದ ಮೇರು ಕವಿ, ಅಗ್ರಮಾನ್ಯ ಕವಿ, ಕಾದಂಬರಿಕಾರ, ವಿಮರ್ಶಕ, ಉತ್ತಮ ಚಿಂತಕರೂ ಆಗಿದ್ದರು. ಇವರು ಅನೇಕ ನಾಟಕಗಳನ್ನು ಬರೆದಿದ್ದಾರೆ. 20ನೇಯ ಶತಮಾನದ ಶ್ರೇಷ್ಠಕವಿ, ವರಕವಿ ಬೇಂದ್ರೆಯವರಿಂದ “ಯುಗದಕವಿ ಜಗದಕವಿ” ಎನಿಸಿಕೊಂಡವರು. ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದವರು ಕುವೆಂಪುರವರು.ಜಲಗಾರ ನಾಟಕ ಆರಂಭಗೊಳ್ಳುವುದು ಆಗಷ್ಟೇ ಸೂರ್ಯ ಮೂಡುವ ಹೊತ್ತಿನಲ್ಲಿ ಇನ್ನೂ ರಂಗದ ಮೇಲೆಲ್ಲಾ ಮಬ್ಬು ಮಬ್ಬು ಕತ್ತಲು, “ಮೂಡಿ ಬಾ, ಮೂಡಿ ಬಾ, ಜಗದ ಕಣ್ಣೆ ಬಾ, ಬಾ” ಎಂದು ಬೆಳಗನ್ನು ಸ್ವಾಗತಿಸುವ ಹಾಡಿನ ಮೂಲಕ ನಾಟಕ ಆರಂಭಗೊಳ್ಳುತ್ತದೆ. ಜಲಗಾರ ನಾಟಕದಲ್ಲಿ ಇರುವುದು ಎರಡು ದೃಶ್ಯಗಳು. ಮೊದಲನೆಯದು “ದೇವಸ್ಥಾನಕ್ಕೆ ಜನರು ಹೋಗುತ್ತಿರುವುದು” ಎರಡನೆಯದು “ದೇವಸ್ಥಾನದಿಂ
APA, Harvard, Vancouver, ISO, and other styles
41

ಪಾಟೀಲ, ಡಾ ಮಹಾಂತಗೌಡ. "ಬಸವಣ್ಣನವರ ಜಾತ್ಯಾತೀತ ಸಮಾಜದ ಚಿಂತನೆ". International Journal of Kannada Research 10, № 1 (2024): 101–4. http://dx.doi.org/10.22271/24545813.2024.v10.i1b.945.

Full text
APA, Harvard, Vancouver, ISO, and other styles
42

ಪಂಪಾಪತಿ, ವಿ. "ಲೈಂಗಿಕ ಜೀತದ ನಿರ್ಮೂಲನೆ ಮತ್ತು ಸಮಾಜದ ಪಾತ್ರ". International Journal of Advance Research in Multidisciplinary 2, № 2 (2024): 300–304. https://doi.org/10.5281/zenodo.13319437.

Full text
Abstract:
ಲೈಂಗಿಕ ಕಾರ್ಯಕರ್ತೆಯರನ್ನು ಇನ್ನು ಮುಂದೆ ಕಾನೂನಿನ ಅಡಿಯಲ್ಲಿ ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ. ಪ್ರಶ್ನೆ ಉದ್ಭವಿಸುತ್ತದೆ: ಅವರು ಸಾಕಷ್ಟು ಆರ್ಥಿಕ ಬೆಂಬಲವನ್ನು ನೀಡದಿದ್ದರೆ, ನಮ್ಮ ಹಿರಿಯರ ಹೆಣ್ಣುಮಕ್ಕಳನ್ನು ಈ ವೃತ್ತಿಗೆ ಏಕೆ ಒತ್ತಾಯಿಸಬೇಕು? ನಾವು ಈ ಸಮಸ್ಯೆಯನ್ನು ಇಂದು ಅಲ್ಲ, ನಾಳೆ ಸಮರ್ಥವಾಗಿ ಪರಿಹರಿಸಬಹುದು. ನಮ್ಮ ಪ್ರಸ್ತುತ ಪರಿಸ್ಥಿತಿಯನ್ನು ನಾವು ಪ್ರತಿಬಿಂಬಿಸಿದರೆ, ನಾವು ಈ ಸಂಕಟದಲ್ಲಿ ಅನಿರ್ದಿಷ್ಟವಾಗಿ ಉಳಿಯಲು ಉದ್ದೇಶಿಸಿದ್ದೇವೆ ಎಂದು ನಾವು ನಿಜವಾಗಿಯೂ ನಂಬುತ್ತೇವೆಯೇ? ಅವಳು ಈ ವಿಚಾರಣೆಯನ್ನು ಮುಂದಿಟ್ಟಳು. ತೀವ್ರ ಬಡತನದಿಂದ ಪಾರಾಗುವ ಹತಾಶ ಪ್ರಯತ್ನದಲ್ಲಿ, ಆಕೆಯ ತಂದೆ 15 ನೇ ವಯಸ್ಸಿನಲ್ಲಿ ಲೈಂಗಿಕ ಕೆಲಸವನ್ನು ಆಶ್ರಯಿಸಿದರು. ಶಿಕ್ಷಣ ವೃತ್ತಿಪರ ಕೌಶಲ್ಯಗಳು ಅಥವಾ ಕಾರ್ಯಸಾಧ್ಯವಾದ ಉದ್ಯೋಗಾವಕಾಶ
APA, Harvard, Vancouver, ISO, and other styles
43

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್‌ ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್‌‌ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
44

ಶಶಾಂಕ, ಕೆ. ಎಸ್. "ಸ್ವಾತಂತ್ರ್ಯ ಪೂರ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಾದ ಸಮಾಜೋ-ರಾಜಕೀಯದ ಸ್ಥಿತ್ಯಂತರ". AKSHARASURYA JOURNAL 03, № 04. SPECIAL ISSUE. (2024): 09 to 23. https://doi.org/10.5281/zenodo.10929613.

Full text
Abstract:
‘ಸಕ್ಕರೆಯ ಸೀಮೆ’ ಎಂದು ಪ್ರಖ್ಯಾತಿ ಪಡೆದುಕೊಂಡಿರುವ ಮಂಡ್ಯ ಜಿಲ್ಲೆ ಇಂದು ರಾಜಕೀಯ, ಸಾಮಾಜಿಕ ಹಾಗೂ ಕೃಷಿ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ. ಇದಕ್ಕೆಲ್ಲಾ ಕಾರಣ ಮಂಡ್ಯ ಜಿಲ್ಲೆಯ ಜೀವನಾಡಿ ಕನ್ನಂಬಾಡಿ ಕಟ್ಟೆಯಾಗಿದೆ. ಮೈಸೂರಿನ ಅರಸ ನಾಲ್ವಡಿಯವರನ್ನು ರಾಷ್ಟ್ರಪಿತ ಮಹಾತ್ಮಗಾಂಧಿಯವರು ರಾಜರ್ಷಿಯೆಂದು ಕರೆದರು. ಇದಕ್ಕೆ ನಾಲ್ವಡಿಯವರ ಪ್ರಜಾಹಿತಾತ್ಮಕ ಧೋರಣೆಗಳು. ಸರ್ವಾಧಿಕಾರಿಯೊಬ್ಬ ಪ್ರಜಾಸತ್ತಾತ್ಮಕ ಮನೋಭಾವ ತಳೆಯುವುದು ಜಗತ್ತಿನ ರಾಜಕೀಯ ಇತಿಹಾಸದಲ್ಲಿಯೇ ಅಪರೂಪದ ಸಂಗತಿಯಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ಏಷ್ಯಾ ಖಂಡದಲ್ಲಿಯೇ ಮೊದಲ ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಹಾಗೆಯೇ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟನ್ನು ನಿರ್ಮಿಸಿದರು. ಹ
APA, Harvard, Vancouver, ISO, and other styles
45

ಅಮರನಾಥ್‌, ಎನ್‌. "ಕರಾವಳಿ ಜಾನಪದಕ್ಕೆ ಪುರುಷೊತ್ತಮ ಬಿಳಿಮಲೆಯವರ ಕೊಡುಗೆ". Aksharasurya Journal 05, № 05 (2025): 114 to 120. https://doi.org/10.5281/zenodo.14619640.

Full text
Abstract:
ಪುರುಷೋತ್ತಮ ಬಿಳಿಮಲೆ ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಚಿಂತನಶೀಲ ಬರಹಗಾರರಲ್ಲೊಬ್ಬರು. ತಮ್ಮ ಜನಪದ ಸಂಶೋಧನೆ, ವಿಮರ್ಶೆ ಹಾಗೂ ಅಂಕಣ ಬರಹಗಳಲ್ಲಿ ಸಮಾಜದ ಸಂಸ್ಕೃತಿಯನ್ನು ಮತ್ತು ವರ್ತಮಾನದ ನೈಜತೆಯನ್ನು ಹಿಡಿದಿಟ್ಟಿದ್ದಾರೆ. ಇದು ಅವರ ಬರಹದಲ್ಲಿ ಪ್ರತಿ ಹಂತದಲ್ಲೂ ಸ್ಪಷ್ಟವಾಗಿ ತೋರುತ್ತದೆ.   ಬಿಳಿಮಲೆ ಅವರ ಸಂಶೋಧನಾ ಬರಹದಲ್ಲಿ ಕರಾವಳಿ ಮತ್ತು ಸುಳ್ಯ ಪರಿಸರ ಸಮಾಜದ ಬದುಕಿನ ಜನಪದ ಚಿತ್ರಣವನ್ನು ಜನಪದ ಹಿನ್ನೆಲೆಯಲ್ಲಿ ಗುರುತಿಸುವ ಮೂಲಕ ಹೊಸ ಚರ್ಚೆಗೆ ಅನುವು ಮಾಡಿಕೊಡುತ್ತಾರೆ. ಈ ಅಂಶವನ್ನು ಗಮನಿಸುವುದರ ಮೂಲಕ ಲೇಖಕರು ಮಾಡಿದ ಕರಾವಳಿ ಸಂಶೋಧನೆಯನ್ನು ಇಲ್ಲಿ ಚರ್ಚಿಸಿಲಾಗಿದೆ.
APA, Harvard, Vancouver, ISO, and other styles
46

ಶಂಭುಲಿಂಗ, ಹುಬ್ಬಳ್ಳಿ. "ಶಿವಶರಣರ ದೃಷ್ಟಿಯಲ್ಲಿ ಆರ್ಥಿಕ ಸಿದ್ಧಾಂತ". AKSHARASURYA 03, № 06 (2024): 137 to 142. https://doi.org/10.5281/zenodo.11127274.

Full text
Abstract:
12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಅಂದಿನ ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತಹ ಸುಧಾರಣೆಯನ್ನು ತರಲು ಬಯಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಕಾಯಕದಲ್ಲಿ ತೊಡಗಬೇಕು. ಆ ಕಾಯಕದಿಂದ ಬಂದ ಹಣದಿಂದ ತನ್ನ ಅಗತ್ಯತೆಗಳನ್ನು ಪೂರೈಸಿಕೊಂಡು ಉಳಿದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು ಎಂಬುದು ಶರಣರ ಆಲೋಚನೆಯಾಗಿತ್ತು. ಜೊತೆಗೆ ಸಮಾಜದಲ್ಲಿನ ಸಂಪತ್ತು ಎಲ್ಲ ಜನರಿಗೆ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಅಂತೆಯೆ ‘ಶಿವಶರಣರ ದೃಷ್ಟಿಕೋನದಲ್ಲಿ ಆರ್ಥಿಕ ಸಿದ್ದಾಂತ’ ಎಂಬ ಈ ಲೇಖನದಲ್ಲಿ ಅರ್ಥಶಾಸ್ತ್ರದ ಪರಿಕಲ್ಪನೆಗಳಾದ ಕೃಷಿ, ಉದ್ಯೋಗ, ಉತ್ಪಾದನೆ, ವಿತರಣೆ, ಆದಾಯ, ಅನುಭೋಗ, ಉಳಿತಾಯ ಮುಂತಾದ ಅಂಶಗಳ ಬಗ್ಗೆ ಬೆಳಕನ್ನು ಚೆಲ್ಲಲಾಗಿದೆ. ಉ
APA, Harvard, Vancouver, ISO, and other styles
47

ಗಾಯತ್ರಿ, ಉಪ್ಪಾರ. "ಸಮಾನತೆಯ ಹರಿಕಾರ ಬಸವಣ್ಣ". AKSHARASURYA JOURNAL 04, № 05 Special Issue (2024): 70 to 74. https://doi.org/10.5281/zenodo.13294390.

Full text
Abstract:
ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.
APA, Harvard, Vancouver, ISO, and other styles
48

ಚನ್ನವೀರಯ್ಯ. "ವಚನಗಳಲ್ಲಿನ ಜಾತಿ ಪದ್ಧತಿ ಮತ್ತು ಮೌಢ್ಯಗಳ ವಿಶ್ಲೇಷಣೆ". AKSHARASURYA 05, № 02 (2024): 135 to 142. https://doi.org/10.5281/zenodo.14035388.

Full text
Abstract:
ಹನ್ನೇರಡನೇ ಶತಮಾನವನ್ನು ವಚನ ಸಾಹಿತ್ಯದ ಪರ್ವಕಾಲ ಎಂದು ಕರೆಯಬಹುದು. ಏಕೆಂದರೆ ಜನಸಾಮಾನ್ಯರ ಆಡುಭಾಷೆಯ ಮೂಲಕ ಕನ್ನಡಭಾಷೆಯನ್ನು ಉತ್ತುಂಗಕ್ಕೆ ಏರಿಸಿದ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ. ಬಹು ಮುಖ್ಯವಾಗಿ ಜಾತಿ, ಮತ, ವರ್ಗ, ವರ್ಣ, ಮೇಲು, ಕೀಳು ಹಾಗೂ ಸಾಮಾಜಿಕ ಪಿಡುಗುಗಳಾದ ಮೂಢನಂಬಿಕೆಗಳು ಅನಿಷ್ಟಪದ್ದತಿಗಳ ಆಚರಣೆಯಿಂದ ಸಮಾಜದ ಅಭಿವೃದ್ಧಿಗೆ ಮಾರಕವಾದುದು ಎಂಬುದನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿ ಸಾಮಾಜಿಕ ಬದಾಲಾವಣೆಗೆ ಮುನ್ನುಡಿ ಬರೆದು ನವಮನ್ವಂತರಕೆ ದಾರಿ ದೀಪವಾದವರು. ಆ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದರು. ಸಾಮಾಜಿಕ ಬದಲಾಣೆಯ ಜೊತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಅಂತಹ ಕೆಲವು ವಚನಕಾರರ ವಚನಗಳ ವಿಶ್ಲೇಷಣೆ ಈ ಲೇಖನದಲ್ಲಿ ಚರ್ಚಿಸಲಾಗಿದೆ.
APA, Harvard, Vancouver, ISO, and other styles
49

ಪಂಪಾಪತಿ, ವಿ. "ಸ್ತ್ರೀಯರ ಆರೋಗ್ಯ ಮತ್ತು ಪೌಷ್ಟಿಕತೆ: ಸಾಧ್ಯತೆ-ಸವಾಲುಗಳು". International Journal of Advance Research in Multidisciplinary 1, № 1 (2023): 580–84. https://doi.org/10.5281/zenodo.13321587.

Full text
Abstract:
ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯವನ್ನು ಕಾಯಿಲೆ ಮತ್ತು ದೈಹಿಕ ದೌರ್ಬಲ್ಯದಿಂದ ಮುಕ್ತವಾಗಿರುವುದಷ್ಟೇ ಅಲ್ಲ ಶಾರೀರಿಕ, ಮಾನಸಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಹೊಂದಿರುವುದು ಎಂದು ವ್ಯಾಖ್ಯಾನಿಸುತ್ತದೆ. ಜನರ ಆರೋಗ್ಯ ಮಟ್ಟ ಒಂದು ಸಮಾಜದ ಸ್ಥಾನವನ್ನು ಸೂಚಿಸುತ್ತದೆ. ಅದರಲ್ಲೂ ಮಹಿಳೆಯರ ಆರೋಗ್ಯ ಸ್ಥಿತಿ ಸಮಾಜದ ಸ್ವಾಸ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಸ್ತ್ರೀಯರ ಸಂತಾನೋತ್ಪತ್ತಿ ಕಾರ್ಯ, ಅವರ ಶಾರೀರಿಕ ಮತ್ತು ಮಾನಸಿಕ ವಿಷಯಗಳ ಬಗ್ಗೆ ಸಮಾಜವು ಹೊಂದಿರುವ ಮನೋಭಾವ ಇವೆರಡು ಮಹಿಳೆಯರು ಸಮಾಜದಲ್ಲಿ ಹೊಂದಿರುವ ಸ್ಥಾನ, ಪಾತ್ರಗಳನ್ನು ನಿರ್ಧರಿಸುತ್ತವೆ. ಅವರ ಸ್ಥಾನ ಮತ್ತು ಪಾತ್ರಗಳು ಅವರಿಗೆ ದೊರಕುವ ಆರೈಕೆ ಔಷಧೋಪಚಾರ ಮತ್ತು ಅನಾರೋಗ್ಯವನ್ನು ತಡೆಯಲು ಕೈಗೊಳ್ಳುವ ಕ್ರಮಗಳು ಯಾವುವು, ಹೇಗಿರಬೇಕು ಎಂಬುದನ್ನು ನಿರ್ಣಯಿಸುತ್ತವೆ. ತಾಯ್ತ
APA, Harvard, Vancouver, ISO, and other styles
50

SHA, SHETTAR. "ಬೌದ್ಧರು ನಿರ್ಮಿಸಿದ ಪ್ರಾಕೃತ ಜಗದ್ವಲಯ". AKSHARASURYA JOURNAL 03, № 03 (2024): 01 to 25. https://doi.org/10.5281/zenodo.10774933.

Full text
Abstract:
ಕನ್ನಡ ಸಾಹಿತ್ಯ, ಸಂಸ್ಕೃತಿ, ಶಾಸನ, ಚರಿತ್ರೆ, ಭಾಷೆಯ ಕುರಿತು ಆಳವಾದ ಸಂಶೋಧನೆ ನಡೆಸಿ ಹೊಸ ತಿಳಿವು ನೀಡುವ ಮೂಲಕ ಕನ್ನಡದ ಮನಸುಗಳನ್ನು ಬೆಳಗಿದ ಸಂಶೋಧಕರಲ್ಲಿ ಪ್ರೊ.ಷ.ಶೆಟ್ಟರ್ ಅವರು ಅಗ್ರಗಣ್ಯರಾಗಿದ್ದಾರೆ. ಪ್ರೊ. ಷಡಕ್ಷರಪ್ಪ ಶೆಟ್ಟರ್ ಅವರು ಜನಿಸಿದ್ದು 11 ಡಿಸೆಂಬರ್ 1935ರಂದು ಬಳ್ಳಾರಿ ಜಿಲ್ಲೆ ಹಡಗಲಿ ತಾಲ್ಲೂಕಿನ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್‌ನಲ್ಲಿ ಉನ್ನತ ವ್ಯಾಸಂಗ ಮಾಡಿದ ಇವರು ಸಾಹಿತ್ಯ, ಚರಿತ್ರೆ, ಪ್ರಾಕ್ತನಶಾಸ್ತ್ರ, ಶಾಸನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕಾವ್ಯ ಕುರಿತು ಸುಮಾರು 30ಕ್ಕೂ ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕುವಲ್ಲಿ ಇವರ ಸಂಶೋಧನೆಗಳ ಕೊಡುಗೆ ಬಹಳ ಇತ್ತು. ಕೇಂಬ್ರಿಜ್, ಹಾರ್ವರ್ಡ್,
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!