Academic literature on the topic 'ಡಾ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಡಾ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಡಾ"

1

ಶ್ರೀಧರ್, ಆರ್. "ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್‌". AKSHARASURYA JOURNAL 06, № 05 (2025): 220 to 225. https://doi.org/10.5281/zenodo.15504669.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ‌ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.
APA, Harvard, Vancouver, ISO, and other styles
2

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್‌‌ರವರು. ಮೂಲತ ಅಂಬೇಡ್ಕರ್‌‌ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
3

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ’ ʼಬಾಬಾ ಸಾಹೇಬ್’ ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್‌ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು. ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್‌ ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
4

ವಿನಯ, ಕುಮಾರ್, та ಗೌಡ ಆರ್. ನಾಗಪ್ಪ. "ಮಾತಿಲ್ಲದ ಸಮುದಾಯಕ್ಕೆ ಮಾತಾದ ಕವಿ: ಡಾ. ಸಿದ್ಧಲಿಂಗಯ್ಯ". AKSHARASURYA 03, № 05 (2024): 52–60. https://doi.org/10.5281/zenodo.10938039.

Full text
Abstract:
ಸಾಮಾಜಿಕ ಶ್ರೇಣೀಕರಣ ಭಾರತದ ಸಮಾಜದ ಬಹುಮುಖ್ಯವಾದ ಲಕ್ಷಣ. ಅಂದರೆ ಅದು ಜಾತಿಯ ಆಧಾರದ ಮೇಲೆ ನಿರ್ಧರಿತವಾಗುತ್ತದೆ. ಈ ಶ್ರೇಣೀಕರಣದ ವ್ಯವಸ್ಥೆಯು ಒಂದಿಷ್ಟು ವರ್ಗಗಳನ್ನು ಅಧೀನವಾಗಿಸಿಕೊಳ್ಳುವ ಮೇಲ್ವರ್ಗದ ಉತ್ಪನ್ನವಾಗಿದೆ. ಈ ವರ್ಗವು ಇಲ್ಲಿನ ಕೆಲವು ಸಮುದಾಯಗಳನ್ನು ಹೀನವೆಂದು ಗುರುತಿಸಿಕೊಂಡು ಶತಮಾನಗಳಿಂದ ಶೋಷಣೆಯನ್ನು ಮಾಡಿಕೊಂಡು ಬಂದಿತ್ತು. ಈ ಕೆಳಜಾತಿಗಳಿಗೆ ಯಾವುದೇ ಹಕ್ಕುಗಳು ಇಲ್ಲದೇ ಮೆಲ್ವರ್ಗದ ಜೀತಕ್ಕಷ್ಟೇ ಸೀಮಿತವಾಗಿಸಲಾಗಿತ್ತು. ಶಿಕ್ಷಣ, ಧಾರ್ಮಿಕತೆ, ಸಾಮಾಜಿಕ ಜೀವನ, ಸಮಾನತೆ ಮೊದಲಾದವುಗಳು ಇವರಿಗೆ ಪರಿಚಯವೇ ಇರಲಿಲ್ಲ. ಇವರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡಲಾಗಿತ್ತು. ಭಾರತಕ್ಕೆ ಬ್ರಿಟಿಷರು ಬಂದ ನಂತರ ಅವರು ಇಲ್ಲಿ ಎಲ್ಲರಿಗೂ ಶಿಕ್ಷಣ ನೀಡಿದ್ದರಿಂದಾಗಿ ದಲಿತರಲ್ಲಿ ಹೊಸ ಆಶಾಕಿರಣ ಮೂಡಿತು. ಮುಂದೆ ಅಂಬೇಡ್ಕರ್ ಅ
APA, Harvard, Vancouver, ISO, and other styles
5

ರುಕ್ಮಿಣಿ, ವಿ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ದೃಷ್ಟಿಯಲ್ಲಿ ಅಸ್ಪೃಶ್ಯತೆ". AKSHARASURYA JOURNAL 06, № 05 (2025): 175 to 185. https://doi.org/10.5281/zenodo.15504614.

Full text
Abstract:
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್‌ ಅವರು ಹಿಂದೂ ಸಮಾಜಕ್ಕೆ ಕಳಂಕವೆನಿಸಿರುವ ಅಸ್ಪೃಶ್ಯತೆಯ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಭಾರತದಲ್ಲಿ ಮಾತ್ರ ಇದರ ಆಚರಣೆ ಏಕೆ ಮುಂದುವರೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಮಾನವೀಯ ಮೌಲ್ಯಗಳು ಸಮಾನತೆ ಸ್ವಾತಂತ್ರ್ಯ, ನ್ಯಾಯ, ವಿಶ್ವ ಭ್ರಾತೃತ್ವದ ಆಧಾರದ ಮೇಲೆ ಪುನರ್ಘಟಿಸುವ ಪ್ರಯತ್ನವನ್ನು ಅವರ ಸಾಮಾಜಿಕ ಚಿಂತನೆಯಲ್ಲಿ ಕಾಣಬಹುದು. ಸಾಮಾಜಿಕ ಸಂಶೋಧನೆಯ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರ ಅಸ್ಪೃಶ್ಯತೆಯ ಕುರಿತ ಸಾಮಾಜಿಕ, ರಾಜಕೀಯ, ಧಾರ್ಮಿಕ ವಿಚಾರಗಳು ತುಂಬಾ ಮಹತ್ವವಾಗಿವೆ. ಯುರೋಪಿನ ಚರಿತ್ರೆಯಲ್ಲಿ ಕಂಡುಬರುವ ಅನೇಕ ಅನ್ಯಾಯಗಳನ್ನು ಮೂಢನಂಬಿಕೆಗಳನ್ನು ನಿವಾರಿಸಲಾಗಿದೆ. ಆದರೆ ಭಾರತದಲ್ಲಿ ಹಿಂದೂ ಬ್ರಾಹ್ಮಣ
APA, Harvard, Vancouver, ISO, and other styles
6

ಶೋಭಾ, ಸುರೇಶ್. "ಡಾ. ಅಂಬೇಡ್ಕರ್‌‌ರವರ ಸಾಮಾಜಿಕ ಆಲೋಚನೆಗಳು ಅಸ್ಪೃಶ್ಯರ ವಿಮೋಚನೆ". AKSHARASURYA JOURNAL 06, № 05 (2025): 207 to 219. https://doi.org/10.5281/zenodo.15504651.

Full text
Abstract:
ಸ್ವತಂತ್ರ್ಯಪೂರ್ವ ಭಾರತದ ಜಾತಿ ವ್ಯವಸ್ಥೆಯ ಕರಾಳತೆ ಕಹಿ ಅನುಭವಗಳೊಂದಿಗೆ ಡಾ|| ಬಿ. ಆರ್. ಅಂಬೇಡ್ಕರ್‌‌ರವರು ಅಸ್ಪೃಶ್ಯರಿಗೆ ಮೀಸಲಾತಿ ದೊರಕುವಂತೆ ಮಾಡಿದ ಹೋರಾಟದಲ್ಲಿ ಯಶಸ್ಸನ್ನು ಕಾಣುತ್ತಾರೆ. ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಬದುಕಿನಲ್ಲಿ ಯಶಸ್ಸನ್ನು ಕಂಡರು. ಜಾತಿಯ ಕಾರಣದಿಂದ ಅನೇಕ ಸಂಕಷ್ಟಗಳಿಗೆ ಅವಮಾನಕ್ಕೆ ಗುರಿಯಾಗುತ್ತಾರೆ. ಬದುಕಿನುದ್ದಕ್ಕೂ ಕೆಳವರ್ಗದ ಜನರಿಗಾಗಿ ಹೋರಾಡಿ ಮೀಸಲಾತಿಯ ಮೂಲಕ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಈ ಸೌಲಭ್ಯ ಪಡೆದವರು ತಮ್ಮ ವರ್ಗದವರ ಏಳಿಗೆಗಾಗಿ ಪ್ರಯತ್ನಪಡಬೇಕು ಎಂಬ ಆಶಯವನ್ನು ಹೊಂದಿದ ಅಂಬೇಡ್ಕರ್‌‌ರವರಿಗೆ ತೀವ್ರ ನಿರಾಸೆಯಾಗುತ್ತದೆ. ಕೆಳ ಸಮುದಾಯಗಳಲ್ಲಿಯೇ ಪರಸ್ಪರ ಆಂತರಿಕ ಭಿನ್ನಾಭಿಪ್ರಾಯಗಳು, ಅಸಮಾನತೆಗಳು, ತಾರತಮ್ಯಗಳ ಕಾರಣಗಳಿಂದ ಪ್ರಬಲ ಜಾತಿಯವರ ದೌ
APA, Harvard, Vancouver, ISO, and other styles
7

ಶೋಭಾರಾಣಿ, ಎನ್. "ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಪಾಶುಪತ-ಕಾಳಾಮುಖ ಸಾಧನ ಪಂಥ". AKSHARASURYA 03, № 05 (2024): 61–67. https://doi.org/10.5281/zenodo.10938065.

Full text
Abstract:
ಭಾರತೀಯ ಮತ್ತು ವಿಶೇಷವಾಗಿ ಕರ್ನಾಟಕದ ಆಧ್ಯಾತ್ಮಿಕ ಆರಾಧನಾ ಪಂಥಗಳಲ್ಲಿ ಪಾಶುಪತ-ಕಾಳಾಮುಖ ಪಂಥವು ಬಹು ಮುಖ್ಯವಾದುದು. ಆಧ್ಯಾತ್ಮಿಕ ಪರಂಪರೆಯ ಹಿನ್ನೆಲೆಯಲ್ಲಿ ಮಾತ್ರವಲ್ಲದೇ, ದೇವಾಲಯ ಮತ್ತು ವಾಸ್ತುಶಿಲ್ಪ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೂಡ ಈ ಸಾಧನಾ ಪಂಥದ ಸಾಧಕರು ನೀಡಿರುವ ಕೊಡುಗೆ ಅಪಾರವಾದುದು. ಕರ್ನಾಟಕದ ಬಹುತೇಕ ದೇವಾಲಯಗಳು ಪಾಶುಪತ-ಕಾಳಾಮುಖರಿಂದ ನಿರ್ಮಾಣಗೊಂಡಿವೆ. ಒಂದು ಕಾಲದಲ್ಲಿ ಅಂದರೆ ಕ್ರಿ.ಶ. 12ನೇ ಶತಮಾನಕ್ಕಿಂತ ಸಾಕಷ್ಟು ಪೂರ್ವದಲ್ಲೆ ಈ ಮಾರ್ಗವು ಕರ್ನಾಟಕದಲ್ಲಿ ಪ್ರಮುಖ ಆಧ್ಯಾತ್ಮಿಕ ಮಾರ್ಗವಾಗಿ ಪ್ರಭಾವಶಾಲಿಯಾಗಿತ್ತು. ಹಲವು ರಾಜರುಗಳು ಈ ಮಾರ್ಗಕ್ಕೆ ಪ್ರೋತ್ಸಾಹ ಮತ್ತು ಆಶ್ರಯವನ್ನು ನೀಡಿದ್ದಲ್ಲದೆ, ಸ್ವತಃ ಇದರ ಅನುಯಾಯಿಗಳೂ ಆಗಿದ್ದ ಉದಾಹರಣೆಗಳಿವೆ. ಲಾಕುಳೀಶ, ಕಾಳಾಮುಖ, ಪಾಶುಪತ, ಕಾಪಾಲಿಕ ಮೊದಲಾದ ದಕ್ಷಿಣಾಚ
APA, Harvard, Vancouver, ISO, and other styles
8

ಹುಲುಗಪ್ಪ, ಎನ್. ಎಚ್. "ಡಾ. ರಾಜಕುಮಾರ್ ಅವರ ಕನ್ನಡ ನಾಡು-ನುಡಿ ಸೇವೆ". AKSHARASURYA 04, № 02 (2024): 125 to 136. https://doi.org/10.5281/zenodo.11525959.

Full text
Abstract:
‘ತುಂಬಿದ ಕೊಡ ತುಳುಕುವುದಿಲ್ಲ’ ಎಂಬ ಗಾದೆ ಮಾತಿಗೆ ಡಾ. ರಾಜಕುಮಾರ್ ಅವರು ಸೂಕ್ತ ನಿದರ್ಶನವಾಗಿದ್ದಾರೆ. ಕನ್ನಡ ನಾಡು ಕಂಡ ಉಜ್ವಲ ಕನ್ನಡ ಪ್ರೇಮಿಗಳಲ್ಲಿ ಡಾ. ರಾಜಕುಮಾರ್ ಅವರು ಅಗ್ರಗಣ್ಯರಾಗಿ ನಿಲ್ಲುತ್ತಾರೆ. ಇವರು ಕನ್ನಡ ನಾಡು-ನುಡಿ, ಸಂಸ್ಕೃತಿ ಮೊದಲಾದವುಗಳಿಗೆ ತಮ್ಮ ವಿಶಿಷ್ಟ ವ್ಯಕ್ತಿತ್ವ, ಪ್ರತಿಭೆ ಹಾಗೂ ಐತಿಹಾಸಿಕ ಪಾತ್ರಗಳ ಮೂಲಕ ಸುವರ್ಣ ಅಂಚನ್ನು ಹೊದಿಸಿದ್ದಾರೆ. ರಾಜಕುಮಾರ್ ರವರು ಕೇವಲ ಶ್ರೇಷ್ಠ ನಟರಾಗಿರದೆ, ಕನ್ನಡ ನಾಡಿನ ಅಘೋಷಿತ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ನೆಲ, ಜಲ, ಭಾಷೆಗೆ ಜನದನಿಯಾಗಿ ನಿಂತವರು. ಕನ್ನಡ ನಾಡು ಹಾಗೂ ಹೊರ ರಾಜ್ಯಗಳಲ್ಲಿನ ಹಲವಾರು ಸಾಮಾಜಿಕ ಅವಘಡಗಳು ನಡೆದಾಗ ರಾಜಕುಮಾರ್ ರವರು ಪಾದಯಾತ್ರೆ ಮಾಡಿ ನಿಧಿ ಸಂಗ್ರಹಿಸಿದರು. ರಾಜಕುಮಾರ್ ರವರು ಸರ್ಕಾರಿ ನೌಕರರಿಗೆ ಕಡ್ಡಾಯ ಕನ್ನ
APA, Harvard, Vancouver, ISO, and other styles
9

ಸುಮಾ, ವಸಂತ ಸಾವಂತ. "ಡಾ. ಅರ್ಜುನ ಗೊಳಸಂಗಿಯವರ ಕವಿತೆಗಳಲ್ಲಿ ಹೆಣ್ಣಿನ ಭಿನ್ನ ನೆಲೆಗಳು". AKSHARASURYA 04, № 03 (2024): 103 to 108. https://doi.org/10.5281/zenodo.12672812.

Full text
Abstract:
ಎಪ್ಪತ್ತನೆಯ ದಶಕದಲ್ಲಿ ಕನ್ನಡದಲ್ಲಿ ಆರಂಭವಾದ ದಲಿತ ಮತ್ತು ಬಂಡಾಯ ಸಾಹಿತ್ಯ ಪಂಥ ನೊಂದವರ ದನಿಯಾಗಿ ಮೂಡಿ ಬಂದವು. ಆರಂಭದಲ್ಲಿ ‘ಇಕ್ರಲಾ ಒದಿರಲ’ ಎಂಬಂತಹ ಆಕ್ರೋಶ ಭರಿತ ಮಾತುಗಳನ್ನು ಆಡುತ್ತಲೇ ತನ್ನ ಸುತ್ತಲಿನವರು ತನ್ನ ಮೇಲೆ ಶತಮಾನಗಳ ಕಾಲ ಮಾಡುತ್ತಾ ಬಂದ ಅನ್ಯಾಯವನ್ನು ಜಾತಿ ವ್ಯವಸ್ಥೆಯ ಹೆಸರಿನಲ್ಲಿ ಮಾಡಿದ ಶೋಷಣೆಯನ್ನೂ ವಿರೋದಿಸಲೆಂದೇ ಈ ಸಾಹಿತ್ಯ ಪಂಥಗಳು ಮೂಡಿ ಬಂದವು. ನಂತರದಲ್ಲಿ ಆಕ್ರೋಶ ತುಸು ಕಡಿಮೆಯಾದಂತೆನಿಸಿದರೂ ಅದರ ಸ್ವರೂಪ ಬದಲಾಯಿತೇ ಹೊರತು ಆಳದ ಅಕ್ರೋಶ ಹೋಗಲಿಲ್ಲ.  ದಲಿತ ಸಾಹಿತ್ಯದ ಎರಡನೆಯ ತಲೆಮಾರಿನಲ್ಲಿ ಬಂದ ಲೇಖಕರು ಆಕ್ರೋಶಕ್ಕಿಂತ ಬದುಕನ್ನು ನಿರುಮ್ಮಳವಾಗಿ ಆದರೆ ಒಂದು ಅಭಿಮಾನ ತುಂಬಿದ ದನಿಯಲ್ಲಿ ಬಿತ್ತರಿಸಿದರು. ಅವರ ಸಾಲಿನಲ್ಲಿ ಬಂದ ಪ್ರಮುಖ ಕವಿ ಡಾ. ಅರ್ಜುನ ಗೊಳಸಂಗಿಯವರು. ಕರ್ನಾಟ
APA, Harvard, Vancouver, ISO, and other styles
10

ಎಲ್ಲಪ್ಪ, ಜಿ. "ಭಾರತದ ಪ್ರಜಾಪ್ರಭುತ್ವದ ಪಿತಾಮಹರಾಗಿ ಡಾ. ಬಿ. ಆರ್. ಅಂಬೇಡ್ಕರ್‌". AKSHARASURYA JOURNAL 06, № 05 (2025): 36 to 45. https://doi.org/10.5281/zenodo.15504196.

Full text
Abstract:
ವಿಸ್ತಾರವಾದ ದೇಶ, ವೈವಿಧ್ಯಮಯವಾದ ಸಂಸ್ಕೃತಿಗಳು, ಸಾವಿರಾರು ಭಾಷೆಗಳು, ಸಾವಿರಾರು ಜಾತಿಗಳು, ವಿಭಿನ್ನ ಮತಗಳು ಈ ಮಣ್ಣಿನಲ್ಲಿ ಜೀವಿಸುತ್ತಿವೆ. ಈ ಎಲ್ಲವುಗಳಿಗೆ ಜೀವ ಕೊಡುವ ತತ್ವ ಯಾವುದು? ಮತ್ತು ಇವುಗಳನ್ನು ಬೆಸೆಯುವ ಸೂತ್ರ ಯಾವುದು? ಎಂಬ ಆಲೋಚನೆಗಳ ಬೆನ್ನ ಹತ್ತಿದಾಗ ಸಿಗುವ ಪೂರಕ ಶಕ್ತಿಗಳ ಬಗ್ಗೆ ಅಧ್ಯಯನಕ್ಕೆ ಪ್ರಜಾಪ್ರಭುತ್ವವೊಂದು ಮುಖ್ಯವಾಗಿ ಮುನ್ನೆಲೆಗೆ ಬರುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಇದು ಬೆಳೆದು ಬಂದ ಪರಂಪರೆ, ಅದು ಗಟ್ಟಿಗೊಂಡ ಹಿನ್ನೆಲೆಗಳು ಆಸಕ್ತಿದಾಯಕಗಳಾಗಿವೆ. ಬಾಬಾ ಸಾಹೇಬರು ಪ್ರಜಾಪ್ರಭುತ್ವವನ್ನು ಭಾರತೀಯ ಮಣ್ಣಿನಲ್ಲಿ ಕೃಷಿ ಮಾಡಿದ ಬಗ್ಗೆ ಗಮನಾರ್ಹವಾದದ್ದು. ಎಲ್ಲಾ ಜನರು ಬದುಕಲಿಕ್ಕೆ ಬೇಕಾದ ಜೀವನ ವಿಧಾನ ಮತ್ತು ಆಡಳಿತ ಕ್ರಮವಾಗಿಸುವಲ್ಲಿ ಸಶಕ್ತವಾದ ಸೂತ್ರವೊಂದನ್ನು ಪ
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!