Littérature scientifique sur le sujet « ವಚನ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ವಚನ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ವಚನ"

1

ಗೌಡ., ಎಂ.ಟಿ. "ವಚನ ಸಾಹಿತ್ಯ: ಮಾನವ ಮೌಲ್ಯಗಳ ಪ್ರತಿಬಿಂಬ". AKSHARASURYA JOURNAL 06, № 04 (2025): 90 to 96. https://doi.org/10.5281/zenodo.15490961.

Texte intégral
Résumé :
ವಚನವೆಂಬುದು ಕೇವಲ ಸಾಹಿತ್ಯ ಪ್ರಕಾರವಲ್ಲ ಅದು ಒಂದು ಚಳುವಳಿ ಕೂಡ ಆಗಿದೆ. ಅದನ್ನು ಸಮಾಜೋ ಧಾಶ್ರಮಿಕ ಚಳುವಳಿ, ಕಾಯಕ ಜೀವಿಗಳ, ಚಳುವಳಿ ಪರಿಪೂರ್ಣ ಚಳುವಳಿ ಎಂದು ಬಗೆಬಗೆಯಾಗಿ ಕನ್ನಡ ವಿದ್ವಾಂಸರು ಅದರ ಸ್ವರೂಪ ಮಹಿಮೆಯನ್ನು ಬಣ್ಣಿಸಿದ್ದಾರೆ. ವಚನ ಸಾಹಿತ್ಯ ಇಡೀ ಭಾರತೀಯ ಭಾಷೆಗಳಲ್ಲಿಯೇ ವಿಶಿಷ್ಟವಾದುದು. ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆ ಆದಾಗಿದೆ ಎಂದರೂ ನಡೆಯುತ್ತದೆ. ಮಾನವ ಕುಲದ ಸರ್ವಾಂಗೀಣ ವಿಕಾಸಕ್ಕಾಗಿ ಶ್ರಮಿಸಿದ ಮಹಾತ್ಮರಾದ ಶಿವಶರಣರು ಅನನ್ಯ ಕೊಡುಗೆ ನೀಡಿರುವ ಜಗತ್ತಿನ ಅಪರೂಪದ ಸಾಹಿತ್ಯ ವಚನಗಳು. ವಚನಗಳು ಎಂದಾಕ್ಷಣ ನೆನಪಾಗುವುದೇ ಶಿವಶರಣರು. ಶರಣ ಪಂಥಕ್ಕೆ ಭಕ್ತಿಯ ಶಕ್ತಿಯೇ ಕೇಂದ್ರ ಬಿಂದು. ವಚನ ಸಾಹಿತ್ಯವು ಸವಿಸ್ತಾರವಾದ ಸಮುದ್ರದ ಆಳದಲ್ಲಿನ ಮುತ್ತು, ರತ್ನಗಳನ್ನು ಹೆಕ್ಕಿ ಅಳೆದು, ತೂಗಿ ಸ
Styles APA, Harvard, Vancouver, ISO, etc.
2

ಶೀಲಾದೇವಿ, ಎಸ್. ಬಿರಾದಾರ. "ವೀರಾಂಗಿಣಿ ಅಕ್ಕಮಹಾದೇವಿ". AKSHARASURYA JOURNAL 04, № 06 (2024): 152 to 156. https://doi.org/10.5281/zenodo.13725661.

Texte intégral
Résumé :
ಹಳೆಗನ್ನಡ ಸಾಹಿತ್ಯವು ರಾಜ್ಯಾಶ್ರಯದಲ್ಲಿಯೇ ಪಂಡಿತ ಪಾಮರರಿಗೆ ಮಾತ್ರ ಸಿಮಿತವಾಗಿತ್ತು. ಹನ್ನೆರಡನೆ ಶತಮಾನದಲ್ಲಿ ವಚನ ಸಾಹಿತ್ಯಯೂ ತೀರಾ ಸರಳ ಸಹಜವಾಗಿ ತಾವು ಬೋದಿಸುವುದು ಸಾಮಾನ್ಯನಿಗೂ ತಲುಪಬೇಕು ಎಂಬ ಆಶಯ ಹೊಂದಿದವರು. ಶಿವಶರಣರು ಶಿವಶರಣೆಯರ ಆಲೋಚನೆಗಳನ್ನು ಅನುಭವಗಳನ್ನು ವಿಚಾರಧಾರೆಗಳೆ ವಚನ. ಜನಸಾಮಾನ್ಯರ ಭಾಷೆಯಲ್ಲಿಯೆ ತಮ್ಮ ಭಾವನೆಗಳನ್ನು ಅನಿಸಿಕೆಗಳನ್ನು ತತ್ವಗಳನ್ನು ಹಾಗೂ ಅವರ ಆತ್ಮಾನುಭವಗಳೇ ವಚನರೂಪದಲ್ಲಿ ವ್ಯಕ್ತಪಡಿಸಿದ್ದು ವಚನ ಸಾಹಿತ್ಯ. ವಚನ ಸಾಹಿತ್ಯ ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ಕನ್ನಡ ಸಾಹಿತ್ಯದ ಹೆಮ್ಮೆಯಾಗಿದೆ. ವಚನ ಸಾಹಿತ್ಯದಲ್ಲಿ ಕಾಣಿಸುವ ವಿಶಿಷ್ಟ ಪ್ರತಿಭೆಯ ಮಹಿಳೆ ಅಕ್ಕಮಹಾದೇವಿ. ಕನ್ನಡ ಸಾಹಿತ್ಯದ ಮೊದಲ ಕವಿಯತ್ರಿ ಮತ್ತು ವಚನಗಾರ್ತಿ, 12 ನೆಯ ಶತಮಾನದ ಪ್ರಪ್ರಥಮವಾಗಿ ಪುರುಷರಿಗೆ ಸಮಾನವಾಗಿ ನಿಂ
Styles APA, Harvard, Vancouver, ISO, etc.
3

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Texte intégral
Résumé :
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
Styles APA, Harvard, Vancouver, ISO, etc.
4

ಶ್ರೀನಿವಾಸ, ಎಸ್.ಜಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು". AKSHARASURYA JOURNAL 06, № 04 (2025): 01 to 10. https://doi.org/10.5281/zenodo.15490768.

Texte intégral
Résumé :
ʼಕಾಯಕವೇ ಕೈಲಾಸʼ ವೆಂದು ಸಾರಿ, ಜನರಲ್ಲಿ ದುಡಿದು ತಿಂದು ಬದುಕುವ ಮಹತ್ವವನ್ನು ತಿಳಿಸಿದ್ದು ವಚನ ಸಾಹಿತ್ಯ. ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸ್ತ್ರೀಯರಿಗೆ ಭಾಗವಹಿಸುವ ಸಮಾನ ಅವಕಾಶ ನೀಡುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೊಂದು ಅರ್ಥವನ್ನು ಕಲ್ಪಿಸಿದರು. ಕಲುಷಿತಗೊಂಡಿದ್ದ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯನ್ನು ದಿಕ್ಕರಿಸಿ, ಘನ ಬದಲಾವಣೆಯನ್ನು ಗುರಿಯಿಟ್ಟು ನಡೆದ ದಾರ್ಶನಿಕ ಚಳುವಳಿ ವಚನ ಸಾಹಿತ್ಯ. ಸಾಮಾಜಿಕ ಬದಲಾವಣೆಗೆ ಹೊಸ ಭಾಷ್ಯ ಬರೆಯುವ ಮೂಲಕ ಉತ್ತಮ ಸಮಾಜ ವ್ಯವಸ್ಥೆಗೆ ನಿಜವಾದ ಅರ್ಥ ಕಲ್ಪಿಸಿ ಕೊಟ್ಟವರು. ಸಮಾಜದ ಕೀಳುಮಟ್ಟದ ಶೋಷಣೆಯಿಂದಾಗಿಯೇ ಸಮಾಜದಲ್ಲಿ ದುಡಿಯುವ ಮತ್ತು ಕೂತು ಉಣ್ಣುವ ವರ್ಗಗಳು ನಿರ್ಮಾಣವಾಗುವುದಕ್ಕೆ ಕಾರಣವಾಗಿರಬೇಕು, ಸಮಾಜದಲ್ಲಿ ಮೇಲ್ವರ್ಗವೆಂದು ಕರೆಸಿಕೊಂಡ ಜನರು ಸಮಾಜದ ಇತರರನ್ನು
Styles APA, Harvard, Vancouver, ISO, etc.
5

ಕುಸುಮಾಂಜಲಿ, ಎಲ್. ಸಿ. ಜಗದೀಶ್. "ವಚನ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ". AKSHARASURYA JOURNAL 06, № 04 (2025): 11 to 18. https://doi.org/10.5281/zenodo.15490805.

Texte intégral
Résumé :
ಇದರಲ್ಲಿ ವಚನ ಸಾಹಿತ್ಯ ಮತ್ತು ಸ್ತ್ರೀ ಸಂವೇದನೆಯ ಸಂಬಂದವನ್ನು ಹೇಳಲಾಗಿದೆ. ಸ್ತ್ರೀ ಸಂವೇನೆ ಎಂದರರೇನು ಮತ್ತು ಸ್ತ್ರೀವಾದಕ್ಕಿರುವ ಮೌಲ್ಯವು ಯಾವುದು ಹಾಗೂ ಸಂವೇದನೆ ಎಂದರೆ ಏನು ಎಂದು ವಿವರಿಸಲಾಗಿದೆ. ಆದರೆ ಸ್ತ್ರೀವಾದವನ್ನು ಇಲ್ಲಿ ಆನ್ವಯಿಕವಾಗಿ ಮಾತ್ರವೇ ಬಳಸಲಾಗಿದೆ. ಎಲ್ಲಿಯೂ ವಚನ ಕಾರ್ತಿಯರನ್ನು ಮತ್ತು ವಚನಗಳನ್ನು ಹೆಚ್ಚು ಉಲ್ಲೇಖಿಸಲಿಕ್ಕೆ ಹೋಗಲಿಲ್ಲ. 
Styles APA, Harvard, Vancouver, ISO, etc.
6

ಭೀ., ಜಿ. ನಂದನ. "ಭಾರತ ಸಂವಿಧಾನ ಮತ್ತು ಬಸವಾದಿ ಶರಣರ ಚಿಂತನೆಗಳು". AKSHARASURYA 03, № 06 (2024): 117 to 128. https://doi.org/10.5281/zenodo.11127212.

Texte intégral
Résumé :
ಭಾರತದ ಸಂವಿಧಾನ ಮತ್ತು ಬಸವಾದಿಶರಣರ ಚಿಂತನೆಗಳು ಎಂಬ ಎರಡು ಮಹಾನ್ ಐತಿಹಾಸಿಕ ದಾಖಲೆಗಳು. ಭಾರತದ ಸಂವಿಧಾನವನ್ನು ಮತ್ತು ಶರಣರ ವಚನ ಸಾಹಿತ್ಯವನ್ನು ಆಳವಾಗಿ ಆಧ್ಯಯನಗೈದವರಿಗೆ ವಚನ ಸಾಹಿತ್ಯದ ಪ್ರತಿಧ್ವನಿಯೇ ಭಾರತ ಸಂವಿಧಾನವೆಂಬ ಒಂದು ಸತ್ಯವು ಗೋಚರಿಸುತ್ತದೆ. ವಚನ ಸಾಹಿತ್ಯದ ವ್ಯಾಪ್ತಿಯು ಆಕಾಶದಷ್ಟು ವಿಶಾಲವಾದದ್ದು ಮತ್ತು ಸಾಗರದಷ್ಟು ಆಳವಾದದ್ದು ಹಾಗು ಅದು ವಿಶ್ವಮಾನವ ಕುಲಕೊಟಿಗೆ ಕಾಲಾತೀತವಾಗಿ ಸಂಬಂಧಿಸಿದ್ದಾಗಿದೆ. ಆದರೆ ಭಾರತದ ಸಂವಿಧಾನವು ವಿಶ್ವದ ಎಲ್ಲ ಸಂವಿಧಾನಗಳ ಒಳ್ಳೆ ಅಂಶಗಳನ್ನು ಒಳಗೊಂಡಿದ್ದರೂ ಅದರ ವ್ಯಾಪ್ತಿಯು ಮಾತ್ರ ಭಾರತಕ್ಕಷ್ಟೇ ಸಿಮಿತವಾಗಿದೆ. ಭಾರತದ ಸಂವಿಧಾನವು ಸಂಸತ್ತಿಕ ಪ್ರಜಾಪ್ತಭುತ್ವ ಮತ್ತು ಸಮಾಜಿಕ ಕಲ್ಯಾಣ ರಾಜ್ಯದ ಹಾಗು ಸಾಮಾಜಿಕ ನ್ಯಾಯದ ಕುರಿತಷ್ಟೇ ಚಿಂತಿಸಿದರೆ ವಚನ ಸಾಹಿತ್ಯವು ಆಧ್ಯಾತ್ಮಿಕ ಪ್ರಜಾ
Styles APA, Harvard, Vancouver, ISO, etc.
7

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Texte intégral
Résumé :
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
Styles APA, Harvard, Vancouver, ISO, etc.
8

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Texte intégral
Résumé :
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
Styles APA, Harvard, Vancouver, ISO, etc.
9

ಸೋಮಶೇಖರ, ಎಂ. "ಹರಿಹರನ ರಗಳೆಯಲ್ಲಿ ಶರಣ ಕೆಂಬಾವಿ ಭೋಗಣ್ಣ". AKSHARASURYA 04, № 02 (2024): 145 to 156. https://doi.org/10.5281/zenodo.11525997.

Texte intégral
Résumé :
ವಚನ ಸಾಹಿತ್ಯದ ಮಾತು ಬಂದ ತಕ್ಷಣವೇ ನಮ್ಮಲ್ಲಿ ಬಸವಾದಿ ಶರಣರ ಆಲೋಚನೆಗಳು ಸುಳಿದಾಡುತ್ತವೆ. ವಚನ ಸಾಹಿತ್ಯದ ಮೇಲೆ ಸಾಕಷ್ಟು ಸಂಶೋಧನೆಗಳು ನಡೆದಿದೆ; ನಡೆಯತ್ತಲೇ ಇದೆ. ವಚನ ಸಾಹಿತ್ಯವನ್ನು ಅಧ್ಯಯನದ ದೃಷ್ಟಿಯಿಂದ ಬಸವಪೂರ್ವ ಯುಗ (11ನೇ ಶತಮಾನ), ಬಸವ ಯುಗ (12-13ನೇ ಶತಮಾನ), ಬಸವೋತ್ತರ ಯುಗ (15-19ನೇ ಶತಮಾನ) ಹಾಗೂ ಆಧುನಿಕ ಯುಗ (20ನೇ ಶತಮಾನ) ಎಂದೂ ವಿಭಾಗಿಸಿಕೊಳ್ಳಲಾಗಿದೆ. ಈ ಸಾಹಿತ್ಯ ಸೃಷ್ಟಿಯ ಪ್ರಮುಖ ಕಾರಣ ಹಾಗೂ ಪ್ರೇರಣೆಗಳೆಂದರೆ ಶರಣ ಧರ್ಮದ ತತ್ವಗಳ ಪ್ರಸಾರ ಮಾಡುವುದು ಹಾಗೂ ಅಂದಿನ ಸಮಾಜದಲ್ಲಿನ ಅಸಮಾನತೆಯನ್ನು ಹೊಡೆದೋಡಿಸುವುದು. ಹನ್ನೊಂದನೆಯ ಶತಮಾನದಲ್ಲಿ ಈ ಕಾರ್ಯವನ್ನು ಕೈಗೊಂಡವರು ಕೊಂಡಗುಳಿ ಕೇಶಿರಾಜ, ಕೆಂಬಾವಿ ಭೋಗಣ್ಣ, ಶಂಕರದಾಸಿಮಯ್ಯ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಸಕಳೇಶ ಮಾದರಸ, ಜೇಡರದಾಸಿಮಯ್ಯ ಹಾಗೂ ಚಂದ
Styles APA, Harvard, Vancouver, ISO, etc.
10

ಕುಮಾರ, ಹೆಚ್.ಸಿ. "ವಚನ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು". AKSHARASURYA JOURNAL 06, № 04 (2025): 19 to 26. https://doi.org/10.5281/zenodo.15490817.

Texte intégral
Résumé :
ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ವಿಶಿಷ್ಟ ಮಾದರಿಯ ಸಾಹಿತ್ಯ ಪ್ರಕಾರವಾಗಿದ್ದು, ಕಾಯಕಕ್ಕೆ, ಮಾನವೀಯ ಸಂಬಂಧಗಳಿಗೆ ಹಾಗೂ ಸೃಜನಶೀಲತೆಗೆ ಪ್ರಮುಖ ಸ್ಥಾನವನ್ನು ನೀಡಿ ಗೌರವಿಸಿದೆ. ಶಿವಶರಣರು ತಮ್ಮ ದಿನನಿತ್ಯದ ನಡೆನುಡಿಗಳನ್ನೇ ವಚನಗಳೆಂಬ ಹಾಡುಗಬ್ಬವಾಗಿ ರಚಿಸಿದರು. ಬಸವಣ್ಣ, ಅಕ್ಕ, ಅಲ್ಲಮ ದಾಸಿಮಯ್ಯ, ಸಿದ್ದರಾಮರಂಥಹ ಅನೇಕ ವಚನಕಾರರರು ಕಾಯಕಕ್ಕೆ ಮಹತ್ವ ಕೊಟ್ಟು ಜನರಲ್ಲಿದ್ದ ಕೆಟ್ಟ ಆಲೋಚನೆಗಳನ್ನು ದೂರ ಮಾಡಿ ಹೊಸ ವಿಶ್ವಾಸದ ಹಾದಿಯನ್ನು ತೋರಿಸಿದರು.ಲಿಂಗ ತಾರತಮ್ಯ, ವರ್ಗ ಸಂಘರ್ಷ, ಜಾತಿ ಪದ್ಧತಿ ಅಸಮಾನತೆ ಮುಂತಾದ ವ್ಯವಸ್ಥೆಗಳ ವಿರುದ್ಧ ಹೋರಾಡಿ ಸಭ್ಯ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ, ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆದರು. ನಡೆ ನುಡಿ ಶುದ್ಧವಾಗಿರಬೇಕು. ಮನುಷ್ಯನಿಗೆ, ಗಾಳಿ, ನೀರು, ಊಟ ಎಷ್ಟು ಮುಖ್ಯವೋ ಅಷ್ಟೇ
Styles APA, Harvard, Vancouver, ISO, etc.
Plus de sources
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!